ಕಾರವಾರ : ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ಅವರು ಕಾರವಾರ ತಾಲೂಕಿನ ಕದ್ರಾ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿ, ಸಂತ್ರಸ್ತರ ಅಹವಾಲು ಆಲಿಸಿದರು.
ಕಳೆದ ಕೆಲದಿನದ ಹಿಂದಷ್ಟೇ ಮುಖ್ಯಮಂತ್ರಿಗಳು ಭೇಟಿನೀಡಿ ನೆರೆಯಿಂದ ಹಾನಿಗೊಳಗಾದ ಸ್ಥಳಗಳ ವೀಕ್ಷಣೆ ನಡೆಸಿ, ಪರಿಹಾರದ ಭರವಸೆ ನೀಡಿದ್ದರು. ಇಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೆರೆಯಿಂದ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಜನರ ಕಷ್ಟ ಆಲಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಆರ್.ವಿ ದೇಶಪಾಂಡೆ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಭೀಮಣ್ಣ ನಾಯ್ಕ, ಮಾಜಿ ಶಾಸಕ ಸತೀಶ ಸೈಲ್ ಸೇರಿದಂತೆ ಹಲವು ನಾಯಕರು ಈ ಸಂದರ್ಭದಲ್ಲಿ ಹಾಜರಿದ್ದರು.
ಬಿಜೆಪಿ ಸರ್ಕಾರ ಬಿದ್ದರೆ, ಚುನಾವಣೆಗೆ ಕಾಂಗ್ರೆಸ್ ಸಿದ್ದ; ಸಿದ್ಧರಾಮಯ್ಯ
ಜಿಲ್ಲೆಯ ಪ್ರವಾಹ ಪರಿಸ್ಥಿತಿ ಪರಿಶೀಲನೆಗೆ ಬಂದ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಕಾರವಾರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸರ್ಕಾರ ಬಿದ್ದರೆ ನಾವು ಚುನಾವಣೆ ಎದುರಿಸಲು ಸಿದ್ದರಿದ್ದೇವೆ ಎಂದು ಹೇಳಿದರು.
ಕಡಲ ತೀರದಲ್ಲಿ ವಾಕ್..!
ಉತ್ತರಕನ್ನಡ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳ ವೀಕ್ಷಣೆಗೆ ಆಗಮಿಸಿ ಕಾರವಾರದಲ್ಲಿ ತಂಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೆಳಿಗ್ಗೆ ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ವಾಕಿಂಗ್ ನಡೆಸಿದರು.ಕಾರವಾರದ ಸರ್ಕ್ಯೂಟ್ ಹೌಸ್ ನಲ್ಲಿ ಭಾನುವಾರ ಸಂಜೆಯೇ ಬಂದು ತಂಗಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಬೆಳಗ್ಗೆ ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ವಾಕಿಂಗ್ ನಡೆಸಿದರು.
ಟೀ ಶರ್ಟ್ ಹಾಗೂ ಟ್ರ್ಯಾಕ್ ಪ್ಯಾಂಟ್ ಧರಿಸಿ ಕಡಲತೀರಕ್ಲೆ ಆಗಮಿಸಿದ್ದ ಸಿದ್ಧರಾಮಯ್ಯ ಅರ್ಧ ಗಂಟೆಗೂ ಹೆಚ್ಚು ಕಾಲ ವಾಕಿಂಗ್ ನಡೆಸಿದರು.ಸಿದ್ಧರಾಮಯ್ಯನವರಿಗೆ ಮಾಜಿ ಶಾಸಕ ಸತೀಶ್ ಸೈಲ್, ಮುಖಂಡರಾದ ಶಂಭು ಶೆಟ್ಟಿ ಸೇರಿದಂತೆ ಮತ್ತಿತರರು ಸಾತ್ ನೀಡಿದ್ದರು.