ಕಾರವಾರ : ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಚಿವ ಸಂಪುಟದಲ್ಲಿ ಸಚಿವರಾಗಿ ಉತ್ತರಕನ್ನಡದ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಹೆಬ್ಬಾರ್ ಸಂತಸ ಹಂಚಿಕೊಂಡಿದ್ದು ಜನತೆಗೆ ಧನ್ಯವಾದ ಸಲ್ಲಿಸಿದ್ದಾರೆ.
ಶಿವರಾಮ ಗೆಬ್ಬಾರ್ ಹೇಳಿದ್ದೇನು?
ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರು ಈಗಷ್ಟೇ ದೂರವಾಣಿ ಮೂಲಕವಾಗಿ ಕರೆ ಮಾಡಿ ನನಗೆ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ಆಹ್ವಾನಿಸಿರುವುದನ್ನು ನಿಮ್ಮ ಮುಂದೆ ಹಂಚಿಕೊಳ್ಳುವುದಕ್ಕೆ ಅತ್ಯಂತ ಸಂತಸವಾಗುತ್ತಿದೆ.
ಕಳೆದ 1 ವರ್ಷ 5 ತಿಂಗಳ ಕಾಲ ರಾಜ್ಯದ ಕಾರ್ಮಿಕ ಖಾತೆ ಸಚಿವನಾಗಿ ಪಕ್ಷ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಬಿ.ಎಸ್.ಯಡಿಯೂರಪ್ಪನವರು ಕೊಟ್ಟ ಜವಾಬ್ದಾರಿಯನ್ನು ಶೃಧ್ದೆಯಿಂದ ನಿರ್ವಹಿಸಿ, ರಾಜ್ಯಾದ್ಯಂತ ಪ್ರವಾಸಮಾಡಿ ಶ್ರಮಿಕ ವರ್ಗಗಳ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆಗಾಗಿ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೆ ತರಲಾಗಿದೆ, ನನಗೆ ನೀಡಿದ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದ್ದೆನೆ ಮುಂದೆಯೂ ಸಹ ಕ್ಷೇತ್ರದ, ರಾಜ್ಯದ ಜನತೆಗೆ ಯಾವುದೇ ಚ್ಯುತಿ ಬರದಂತೆ ಕಾರ್ಯನಿರ್ವಹಿಸುತ್ತೆನೆ.
ನನಗೆ ಮತ್ತೊಮ್ಮೆ ಸಚಿವ ಸ್ಥಾನ ಲಭಿಸಲು ಮೂಲ ಕಾರಣಿಕರರ್ತರಾದ ಯಲ್ಲಾಪುರ-ಮುಂಡಗೋಡ-ಬನವಾಸಿ ವಿಧಾನಸಭಾ ಕ್ಷೇತ್ರದ ಮಹಾ ಜನತೆಗೆ, ನನ್ನ ಮೇಲೆ ನಂಬಿಕೆ ಇಟ್ಟು ಮತ್ತೊಮ್ಮೆ ರಾಜ್ಯ ಜನತೆಯ ಸೇವೆ ಮಾಡುವುದಕ್ಕೆ ಅವಕಾಶ ಕಲ್ಪಸಿದ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರಿಗೆ ಹಾಗೂ ರಾಜ್ಯ, ಮತ್ತು ಕೇಂದ್ರದ ಎಲ್ಲಾ ನಾಯಕರಿಗೂ ನಮ್ಮ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.