ಕಾರವಾರ : ರಾಜ್ಯ ಸರ್ಕಾರವು ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆದೇಶ ಸಂ: ಆರ್ ಡಿ 158 ಟಿಎನ್ಆರ್ 2020, 30-07-2021 ರಲ್ಲಿ ಆಯಾ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಸ್ಥಿತಿಗತಿಯನ್ನು ಆದರಿಸಿ ಸೋಂಕಿನ ನಿಯಂತ್ರಣಕ್ಕಾಗಿ ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದು ಪ್ರಸ್ತುತ ಉತ್ತರಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಸೋಂಕಿನ ಪರಿಣಾಮಕಾರಿ ನಿಯಂತ್ರಣಕ್ಕಾಗಿ ನಾಳೆಯಿಂದ ವಿಪತ್ತು ನಿರ್ವಹಣಾ ಕಾಯಿದೆ 2005 ರ ಕಲಂ 34 ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಮುಲೈ ಮುಹಿಲನ್, ಭಾ.ಆ.ಸೇ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಉತ್ತರ ಕನ್ನಡ ಕಾರವಾರ ಇವರು ಉತ್ತರ ಕನ್ನಡ ಜಿಲ್ಲೆಯಾದ್ಯಂತ ಪ್ರಚಲಿತದಲ್ಲಿರುವ ಸರ್ಕಾರದ ಮಾರ್ಗಸೂಚಿಗೆ

ಹೆಚ್ಚುವರಿಯಾಗಿ ಈ ಕೆಳಕಂಡ ಕ್ರಮಗಳನ್ನು ಮುಂದಿನ ಆದೇಶದವರೆಗೆ ಕೈಗೊಳ್ಳಲು
ಆದೇಶಿಸಿರುತ್ತಾರೆ.

ಏನೆಲ್ಲಾ ನಿಯಮಗಳು?

1. ದೇವಸ್ಥಾನ ಹಾಗೂ ಇತರೆ ಧಾರ್ಮಿಕ ಸ್ಥಳಗಳಲ್ಲಿ ಸೇವಾ ಕಾರ್ಯಗಳಿಗೆ ಅವಕಾಶವಿರುವುದಿಲ್ಲ, ಕೇವಲ ದರ್ಶನಕ್ಕೆ ಮಾತ್ರ ಅವಕಾಶವಿರುತ್ತದೆ. ದೇವಸ್ಥಾನ  / ಧಾರ್ಮಿಕ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿಯ ಪಾಲನೆಯು ಕಡ್ಡಾಯವಾಗಿದ್ದು ಅದರ ನಿರ್ವಹಣೆಯು ಆಯಾ ಆಡಳಿತ ಮಂಡಳಿಗಳ ಜವಾಬ್ದಾರಿಯಾಗಿರುತ್ತದೆ. ದೇವಸ್ಥಾನ / ಧಾರ್ಮಿಕ ಸ್ಥಳಗಳಲ್ಲಿ ದಿನಕ್ಕೆ ಒಂದು ಭಾರಿ ಕಡ್ಡಾಯವಾಗಿ ಸ್ಯಾನಿಟೈಸೇಷನ್ ಮಾಡಬೇಕು.

RELATED ARTICLES  ವಿದ್ವಾನ್ ಉಮಾಕಾಂತ್ ಭಟ್ಟರಿಗೆ ಶ್ರೀರಾಘವೇಂದ್ರ ಭಾರತೀ ಪಾಂಡಿತ್ಯ ಪುರಸ್ಕಾರ

2. ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕೇವಲ 50 ಜನರಿಗೆ ಮಾತ್ರ ಅವಕಾಶ ನೀಡಿದೆ. ಮದುವೆ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಆಯಾ ತಾಲೂಕಾ ತಹಶೀಲ್ದಾರರಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಮದುವೆ ಕಾರ್ಯಕ್ರಮಗಳಲ್ಲಿ ಕೋವಿಡ್ ಮಾರ್ಗಸೂಚಿಯ ಪಾಲನೆಯನ್ನು ಆಯಾ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ, ಪಿಡಿಓ ಹಾಗೂ ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಖಚಿತಪಡಿಸಿಕೊಳ್ಳತಕ್ಕದ್ದು ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮದುವೆ ಕಾರ್ಯಕ್ರಮದಲ್ಲಿ ಹಾಜರಿದ್ದವರ ವಿವರಗಳನ್ನು ಮೊಬೈಲ್ ಸಂಖ್ಯೆಯೊಂದಿಗೆ ಸಂಗ್ರಹಿಸುವುದು. ಮದುವೆ ಕಾರ್ಯಕ್ರಮಕ್ಕೆ ಹಾಜರಿದ್ದವರು ಇದೇ ಜಿಲ್ಲೆಯವರಾಗಿದ್ದರಲ್ಲಿ ಎರಡು ದಿನಗಳ ಒಳಗಾಗಿ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸತಕ್ಕದ್ದು.

3. ಜಿಲ್ಲೆಯ ಗಡಿಭಾಗಗಳಲ್ಲಿ, ರೈಲ್ವೆ ಸ್ಟೇಷನ್ ಗಳಲ್ಲಿ ಹೊರರಾಜ್ಯದಿಂದ ಬರುವಂತಹ ಜನರ ಮೇಲೆ ವಿಶೇಷವಾಗಿ ಕೇರಳ ಹೆಚ್ಚು ನಿಗಾವಹಿಸುವುದು ಹಾಗೂ ರಜಿಸ್ಟರ್ ಗಳನ್ನು ನಿರ್ವಹಿಸುವುದು. ಜನರು ಮತ್ತು ಮಹಾರಾಷ್ಟ್ರ ರಾಜ್ಯದಿಂದ ಬರುವಂತಹ ಕೋವಿಡ್ ಲಸಿಕೆಯನ್ನು ಪಡೆದಿದ್ದರೂ/ಪಡೆಯದಿದ್ದರೂ 72 ಗಂಟೆಯೊಳಗೆ ಮಾಡಿಸಿರುವ RTPCR ಪರೀಕ್ಷೆಯ ನೆಗಟಿವ್ ವರದಿಯನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ.

4. ಜಿಲ್ಲೆಯ ಪ್ರವಾಸಿ ತಾಣಗಳು/ ಬೀಚ್ ಗಳಲ್ಲಿ ಕೋವಿಡ ಮಾರ್ಗಸೂಚಿಯ ಪಾಲನೆಯನ್ನು ಖಚಿತಪಡಿಸಿಕೊಳ್ಳಲು ಪ್ರತಿ ಪ್ರವಾಸಿ ತಾಣಕ್ಕೆ 02 ಜನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲು ಪೊಲೀಸ್ ಅಧೀಕ್ಷಕರು, ಉ.ಕ. ಕಾರವಾರ ರವರು ಕ್ರಮ ಕೈಗೊಳ್ಳುವುದು. ಪ್ರವಾಸಿ ತಾಣಗಳಲ್ಲಿ ಕೋವಿಡ್ ಮಾರ್ಗಸೂಚಿಯ ಕಟ್ಟುನಿಟ್ಟಿನ ಪಾಲನೆಯು ಆಯಾ ಪೊಲೀಸ್ ವೃತ್ತ ನಿರೀಕ್ಷಕರ ಜವಾಬ್ಬಾರಿಯಾಗಿರುತ್ತದೆ.

RELATED ARTICLES  5, 8, 9 ಮತ್ತು 11ನೇ ತರಗತಿಯ ಬೋರ್ಡ ಎಕ್ಸಾಂ ರದ್ದು.

5. ಈ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಜಿಲ್ಲೆಯ ಸಾರ್ವಜನಿಕರು ಕೋವಿಡ್ ಸಮುಚಿತ ವರ್ತನೆ (ಮಾಸ್ಕ ದರಿಸುವುದು ಹಾಗೂ ಸಾಮಾಜಿಕ
ಅಂತರ) ಯನ್ನು ಪಾಲಿಸುವುದರೊಂದಿಗೆ ಕೋವಿಡ್ ನಿಯಂತ್ರಣ ಮಾಡುವಲ್ಲಿ ಸಹಕರಿಸುವುದು. ಆರೋಗ್ಯದಲ್ಲಿ ಏರುಪೇರು ಕಂಡುಬಂದಲ್ಲಿ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳಲು ತಿಳಿಸಿದೆ.

6. ಈ ಮೇಲಿನ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ವಿಭಾಗ 51 ರಿಂದ 60 ರನ್ವಯ, ಭಾರತೀಯ ದಂಡ ಸಂಹಿತ ಸಕ್ಷನ್ 188 ರನ್ವಯ ಹಾಗೂ ಸಾಂಕ್ರಾಮಿಕ ರೋಗ ಕಾಯ್ದೆ 2020 ರ ವಿಭಾಗ 4, 5 ಮತ್ತು 10 ರಂತ ಕ್ರಮಗಳನ್ನು ಜರುಗಿಸಲಾಗುವುದು.

5. ಈ ಆದೇಶದ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಪೋಲಿಸ್ ಅಧೀಕ್ಷಕರು, ಉತ್ತರ ಕನ್ನಡ, ಕಾರವಾರ ರವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಬದ್ಧರಾಗಿರುತ್ತಾರೆ.

IMG 20210804 WA0007