ಕಾರವಾರ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ. ಡಾ.ಅಂಬೇಡ್ಕರ್ ವಸತಿ ಶಾಲೆ, ಡಾ. ಬಿ. ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಹಾಗೂ ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ 2021-22 ನೇ ಸಾಲಿನ 6 ನೇ ತರಗತಿಯ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

RELATED ARTICLES  ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಈಗಾಗಲೇ 5ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ಹಾಗೂ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಆಸಕ್ತ ವಿದ್ಯಾರ್ಥಿಗಳು ಆ. 10ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸೆ. 16 ಕ್ಕೆ ಪ್ರವೇಶ ಪರೀಕ್ಷೆ ನಡೆಸಲಾಗುವುದು. ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಆ. 4 ರಿಂದ 13 ರೊಳಗೆ ಅರ್ಜಿ ಸಲ್ಲಿಸಿದ ವಸತಿ ಶಾಲೆಯಿಂದ ಡೌನ್‍ಲೋಡ್ ಮಾಡಿಕೊಳ್ಳಬೇಕು. ಆಸಕ್ತ ವಿದ್ಯಾರ್ಥಿ ಮತ್ತು ಪೋಷಕರು ಅರ್ಜಿ ಸಲ್ಲಿಸುವ ವಿಧಾನ ಹಾಗೂ ಮಾಹಿತಿ ಪುಸ್ತಕ 2021ನ್ನು ಪ್ರಾಧಿಕಾರದ ವೆಬ್‍ಸೈಟ್ http://kea.kar.nic.in ನಲ್ಲಿ ಪರಿಶೀಲಿಸಬಹುದು ಎಂದು ಸಮಾಜಕಲ್ಯಾಣ ಇಲ್ಯಾಖೆಯ ಉಪನಿರ್ದೇಶಕ ಎಸ್. ಪುರುಷೋತ್ತಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES  ರೋ‍ಟರಿ ಕ್ಲಬ್ ನಿಂದ ವ್ರತ್ತಿಪರ ತರಬೇತಿ ಕೇಂದ್ರದಲ್ಲಿ ಮೊಬೈಲ್ ರಿಪೇರಿ ಕೋರ್ಸ್ ಕಾರ್ಯಗಾರ ನ.15