ಸಿದ್ದಾಪುರ : ಬಸ್‌ನಲ್ಲಿ ಪ್ರಯಾಣಿಸುವ ವೇಳೆ ಸುಮಾರು 5.50 ಲಕ್ಷ ನಗದು ಇದ್ದ ಬ್ಯಾಗ್ ಅನ್ನು ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಶಿರಸಿಯಿಂದ ಬೆಂಗಳೂರಿಗೆ ಹೋಗುವ ರಾಜಹಂಸ ಬಸ್‌ನಲ್ಲಿ ಪ್ರಯಾಣಿಕರ ಹಣವನ್ನು ಕದ್ದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳವುಗೈದ ಆರೋಪಿ, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮಲ್ಲಯ್ಯ ಭೋವಿ ಎನ್ನುವಾತನನ್ನು ಪತ್ತೆ ಹಚ್ಚಿ ಬಂಧಿಸಿ ಆರೋಪಿಯಿಂದ 1 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ವಿಚಾರಣೆ ಮುಂದುವರಿದಿದೆ.
ಸಿದ್ದಾಪುರ ತಾಲೂಕಿನ ನೆಲಮಾಂವು ಗ್ರಾಮದ ಅಣಲೇಬೈಲು ನಿವಾಸಿಗಳಾದ ರಘುಪತಿ ಭಟ್ ಹಾಗೂ ಗಣಪತಿ ಭಟ್ ಎನ್ನುವವರು ನವೆಂಬರ್ 3 , 2020 ರಂದು ರಾತ್ರಿ ಶಿರಸಿಯಿಂದ ಬೆಂಗಳೂರಿಗೆ ಹೋಗುವ ರಾಜಹಂಸ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನಗದು ಇದ್ದ ಬ್ಯಾಗನ್ನು ಬಸ್ಸಿನ ಲಗೇಜ್ ಕ್ಯಾರಿಯರ್ ಮೇಲೆ ಇಟ್ಟಿದ್ದರು. ಆದರೆ ಅದನ್ನು ಯಾರೋ ಕಳವು ಮಾಡಿದ್ದು, ಈ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡ 9 ತಿಂಗಳ ಬಳಿಕ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ ಸ್ಪೆಕ್ಟರ್ ಕುಮಾರ್ ಕೆ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಬಸ್ನಲ್ಲಿ ಪ್ರಯಾಣಿಸುವಾಗ ಚಿನ್ನಾಭರಣ ಹಾಗೂ ನಗದು ಗಳನ್ನು ಎಚ್ಚರಿಕೆಯಿಂದ ಇಟ್ಟುಕೊಳ್ಳಬೇಕಾಗಿದ್ದು ಈ ಘಟನೆ ಇತರರಿಗೆ ಎಚ್ಚರಿಕೆಯ ಗಂಟೆ ಎನ್ನಲಾಗಿದೆ. ಆರೋಪಿಯನ್ನು ಹೆಡೆಮುರಿಕಟ್ಟಿ ರುವ ಬಗ್ಗೆ ಪೊಲೀಸರಿಗೆ ಅಭಿನಂದನೆ ಸಲ್ಲಿಸಲಾಗಿದೆ.