ಕಾರವಾರ : ಎರಡನೇ ಅಲೆಯಿಂದ ಸುಧಾರಿಸಿಕೊಳ್ಳುತ್ತಿದ್ದ ಮೊದಲೇ ಮೂರನೇ ಅಲೆಯ ಭೀತಿ ಶುರುವಾಗಿದೆ ಗಡಿಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ ಎಂಬ ಬಗ್ಗೆ ಮಹತ್ವದ ಮಾಹಿತಿ ಹೊರಬಿದ್ದಿದೆ.

ಆದರೆ ಸದ್ಯಕ್ಕೆ ಉತ್ತರಕನ್ನಡ ಜಿಲ್ಲೆಯ ಹೆಸರು ಈ ಪಟ್ಟಿಯಲ್ಲಿ ಇಲ್ಲ ಎಂಬುದು ಸಧ್ಯದ ಸಮಾಧಾನದ ಸಂಗತಿ. ಉತ್ತರ ಕನ್ನಡದಲ್ಲಿಯೂ ದಿನೇದಿನೇ ಪ್ರಕರಣಗಳು ಹೆಚ್ಚುತ್ತಿದ್ದು ಕೋವಿಡ್ ಪಾಸಿಟಿವಿಟಿ ದರ ಹೆಚ್ಚಿದರೆ ಆತಂಕ ತಪ್ಪಿದ್ದಲ್ಲ. ಅಲ್ಲದೆ, ರಾಜ್ಯದಲ್ಲಿ ಮತ್ತೆ ಕೋವಿಡ್ ನಿಧಾನವಾಗಿ ಹೆಚ್ಚುತ್ತಿದ್ದು, ಇದರೊಂದಿಗೆ ಮತ್ತೆ ಲಾಕ್ ಡೌನ್ ಭಯ ಜನರನ್ನು ಕಾಡುತ್ತಿದೆ.

RELATED ARTICLES  ಅನಂತಕುಮಾರ್ ಅಂತಿಮ ಯಾತ್ರೆ ಆರಂಭ: ಸಕಲ ಸರಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ.

ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಕೇರಳದ ಗಡಿಯಲ್ಲಿರುವ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಅನ್ನು ಇಂದಿನಿoದಲೇ ಜಾರಿಯಾಗಲಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಈ ಆದೇಶ ಹೊರಡಿಸಿದ್ದಾರೆ. ಕೋವಿಡ್ ನಿಯಂತ್ರಣ ಸಂಬoಧ ಸಿಎಂ ಬೊಮ್ಮಾಯಿ ತಜ್ಞರ ಜೊತೆ ಸಭೆ ನಡೆಸಿದ ಬಳಿಕ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

RELATED ARTICLES  ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಚಾಲನೆನೀಡಿದ ಕವಿ ಕೆ.ಎಸ್.ನಿಸಾರ್ ಅಹ್ಮದ್

ಮುಖ್ಯವಾಗಿ ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ, ಬೆಳಗಾವಿ, ಬೀದರ್, ಕೊಡಗು, ಕಲುಬುರಗಿ, ವಿಜಯಪುರದಲ್ಲಿ ಶನಿವಾರ, ಭಾನುವಾರ ಲಾಕ್ ಡೌನ್ ಘೋಷಿಸಲಾಗಿದೆ. ಅಲ್ಲದೆ, ರಾಜ್ಯಾದ್ಯಂತ ನೈಟ್ ಕರ್ಫ್ಯೂ ಅವಧಿಯನ್ನು ಹೆಚ್ಚಿಸಲಾಗಿದ್ದು, ರಾತ್ರಿ 10ರ ಬದಲಾಗಿ ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯವರೆಗೆ ಇರಲಿದೆ.