ಕಾರವಾರ : ಅಂಕೋಲಾ ತಾಲ್ಲೂಕಿನ ಬಾಳೆಗುಳಿ ಬಳಿ ಭೀಕರ ಅಪಘಾತ ಒಂದು ಸಂಭವಿಸಿದ್ದು ಅಪಘಾತದಲ್ಲಿ ಓರ್ವ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇದೀಗ ವರದಿಯಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಕರೆದ ಸಭೆಗೆ ಆಗಮಿಸುತ್ತಿದ್ದ ಅಧಿಕಾರಿಗಳಿದ್ದ ಕಾರ್  ಇದಾಗಿದ್ದು, ಕಾರು ಪಲ್ಟಿಯಾಗಿ ಒಬ್ಬರು ಮೃತಪಟ್ಟು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ.

RELATED ARTICLES  ರಾಷ್ಟ್ರಪತಿ ರಾಮನಾಥ ಕೋವಿಂದ್ ಇಂದು ಉಡುಪಿಗೆ ಭೇಟಿ.

ಮೃತ ದುರ್ದೈವಿಯನ್ನು ಸಿದ್ದಾಪುರ ತಾಲ್ಲೂಕಿನ ಲೋಕೋಪಯೋಗಿ ಎ. ಇ. ಇ ಮುದುಕಣ್ಣನವರ್ ಎಂದು ಗುರುತಿಸಲಾಗಿದೆ. ಸಚಿವ ಶಿವರಾಮ್ ಹೆಬ್ಬಾರ್ ನೇತೃತ್ವದಲ್ಲಿ ಕಾರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೆರೆ ಮತ್ತು ಕೊರೋನಾ ಸಂಭಂದ ಅಧಿಕಾರಿಗಳ ಸಭೆ ಕರೆಯಲಾಗಿತ್ತು.

ಸಭೆಗೆ ಲೋಕೋಪಯೋಗಿ ಇಲಾಖೆಯ ಶಿರಸಿ, ಸಿದ್ದಾಪುರ ಹಾಗೂ ಮುಂಡಗೋಡ ತಾಲೂಕಿನ ಇಂಜಿನಿಯರ್ ಒಂದೇ ಕಾರಿನಲ್ಲಿ ಬರುತ್ತಿದ್ದರು ಎನ್ನಲಾಗಿದೆ.

RELATED ARTICLES  ರಾಮ ಸೇತುವೆಯ ಕುರಿತು ಕೇಂದ್ರ ಸರ್ಕಾರದ ನಿಲುವು ಏನು ಗೋತ್ತಾ?

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಅನಾಹುತ ಸಂಭವಿಸಿದೆ ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದು ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.