ಟೋಕಿಯೊ: ಒಲಂಪಿಕ್ಸ್ ಕ್ರೀಡಾಕೂಟದ ಇತಿಹಾಸದಲ್ಲೇ ಭಾರತ ನೀರಜ್ ಚೋಪ್ರಾ ಐತಿಹಾಸಿಕ ದಾಖಲೆ ನಿರ್ಮಾಣ ಮಾಡಿದ್ದು, ಜಾವೆಲಿನ್ ಥ್ರೋದಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದುಕೊಟ್ಟಿದ್ದಾರೆ.

ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಜಾವೆಲಿನ್ ಥ್ರೋ ವಿಭಾಗದಲ್ಲಿ ನೀರಜ್ ಚೋಪ್ರಾ ತಮ್ಮ ಮೊದಲ ಪ್ರಯತ್ನದಲ್ಲೇ ದಾಖಲೆಯ 87.58ಮೀಟರ್ ದೂರಕ್ಕೆ ಜಾವೆಲಿನ್ ಎಸೆದಿದ್ದು ಅಗ್ರ ಸ್ಥಾನಿಯಾಗುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ. ಆ ಮೂಲಕ ಜಾವೆಲಿನ್ ಥ್ರೋದಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದುಕೊಟ್ಟ ಕೀರ್ತಿಗೆ ನೀರಜ್ ಚೋಪ್ರಾ ಪಾತ್ರರಾಗಿದ್ದಾರೆ.

RELATED ARTICLES  ಈ ವರ್ಷ ಜುಲೈ 1ರಿಂದ ಆಧಾರ್‌ ದೃಢೀಕರಣಕ್ಕೆ ಮುಖದ ಬಿಂಬ

ಹಾಗೆಯೇ 2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಅಭಿನವ್ ಬಿಂದ್ರಾ ಬಳಿಕ ಒಲಿಂಪಿಕ್ಸ್ ವೈಯಕ್ತಿಕ ವಿಭಾಗದ ಸ್ಪರ್ಧೆಯಲ್ಲಿ ಭಾರತದ ಪರ ಸ್ವರ್ಣ ಪದಕ ಗೆದ್ದ ಸಾಧನೆ ಮಾಡಿದ್ದಾರೆ.

RELATED ARTICLES  ಹಿಂಗಾರು ಬಂತು ಮತ್ತೆ ಭಯ ತಂತು!