ಕುಮಟಾ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ- ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಆಗಸ್ಟ್ ತಿಂಗಳಲ್ಲಿ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ಉಚಿತ ತರಬೇತಿ ನಡೆಯಲಿದೆ. ಆ.9ರಿಂದ ಆರಂಭವಾಗುವ ಈ 10 ದಿನಗಳ ತರಬೇತಿಯು 18ರವರೆಗೆ ನಡೆಯಲಿದೆ. ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋಮಿತಿ 18ರಿಂದ 45 ವರ್ಷಗಳು. ಕನಿಷ್ಟ ವಿದ್ಯಾರ್ಹತೆ ಕನ್ನಡ ಮತ್ತು ಇಂಗ್ಲೀಷ್ ಓದಲು, ಬರೆಯಲು ಬರಬೇಕು ಮತ್ತು ತರಬೇತಿಗೆ ಅನುಗುಣವಾಗಿ ಕನಿಷ್ಠ ಜ್ಞಾನವಿರಬೇಕು.

RELATED ARTICLES  ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಆಸಕ್ತರು ನೇರವಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ- ಉದ್ಯೋಗ ತರಬೇತಿ ಸಂಸ್ಥೆ, ಕೈಗಾರಿಕಾ ವಸಾಹತು ಪ್ರದೇಶ, ಹೆಗಡೆ ರಸ್ತೆ, ಕುಮಟಾ- 581 343 ಉತ್ತರಕನ್ನಡ ಜಿಲ್ಲೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅಲ್ಲದೇ ದೂರವಾಣಿ ಸಂಖ್ಯೆ 08386- 220 530, 94498 60007, 95382 81989, 99167 83825, 88804 44612, 96209 62004ಕ್ಕೆ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತರು ತರಬೇತಿಗೆ ಬರುವಾಗ 4 ಪಾಸ್‌ಪೋರ್ಟ್ ಸೈಜ್ ಫೋಟೋ, ರೇಶನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್, ಪಾನ್ ಕಾರ್ಡ್ ಇವುಗಳ 2 ಝರಾಕ್ಸ್ ಪ್ರತಿಯನ್ನು ತರಬೇಕು. ಈ ತರಬೇತಿಯ ಸದುಪಯೋಗವನ್ನು ಪಡೆದುಕೊಂಡು ಉದ್ಯೋಗ ಕೈಗೊಳ್ಳಬೇಕೆಂದು ಕೋರಲಾಗಿದೆ.

RELATED ARTICLES  ಬೆಂಗಳೂರಿನಲ್ಲಿ ಭಾರೀ ಉದ್ಯೋಗ : 3 ರಿಂದ 4 ಲಕ್ಷ ವರಮಾನ