ಕಾರವಾರ : ರಾಜ್ಯದಲ್ಲಿ ಇಂದು ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು, ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ಓರ್ವ ವಿದ್ಯಾರ್ಥಿನಿ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯಲ್ಲಿ ಮೂವರು ವಿದ್ಯಾರ್ಥಿಯರು ಹಾಗೂ ರಾಜ್ಯಕ್ಕೆ ಮೊದಲ ಸ್ಥಾನಗಳಿಸಿದ್ದಾರೆ.

ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸರ್ಕಾರಿ ಪ್ರಾಥಮಿಕ ಫ್ರೌಡಶಾಲೆಯ ಭೂಮಿಕ ಕೃಷ್ಣ ನಾಯ್ಕ 625 ಅಂಕಕ್ಕೆ 625 ಅಂಕ ಗಳಿಸುವ ಮೂಲಕ ಸಾಧನೆ ಮಾಡಿದ್ದಾರೆ. ಕಳೆದ ವರ್ಷ ಒಬ್ಬ ವಿದ್ಯಾರ್ಥಿನಿ 625 ಅಂಕಗಳಿಸಿ ಸಾಧನೆ ಮಾಡಿದ್ದಳು.

RELATED ARTICLES  ಸೂರಜ್ ನಾಯ್ಕ ಸೋನಿ ಬಂಧನ ವಿರೋಧಿಸಿ ಮನವಿ: ಏನಾಗುತ್ತೆ ಮುಂದಿನ ನಡೆ?

Screenshot 20210809 183757 Chrome

ಶಿರಸಿ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯ ಸಿದ್ದಾಪುರದ ಪ್ರಶಾಂತಿ ವಿದ್ಯಾನಿಕೇತನದಲ್ಲಿ ಓದುತ್ತಿರೋ ವಿದ್ಯಾರ್ಥಿನಿ ಹೇಮಾ ಉಮೇಶ ಹೆಗಡೆ ಹಾಗೂ ಸಿದ್ದಾಪುರದ ಕಾನಸೂರಿನ ಕಾಳಿಕಾ ಭವಾನಿ ಪ್ರೌಢಶಾಲೆಯ ಎಸ್.ಎನ್.ಸುನೈ ಮತ್ತು ರೇಷ್ಮಾ ಹೆಗಡೆ 625 ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ.

RELATED ARTICLES  "ಸಂಭ್ರಮ ಶನಿವಾರ" ದಂದು ಸಂಭ್ರಮಿಸಿದ ಮಕ್ಕಳು. ಹೊಲನಗದ್ದೆ ಶಾಲೆಯಲ್ಲಿ ನಡೆಯಿತು ವಿಶೇಷ ಕಾರ್ಯಕ್ರಮ.

ಈ ಬಾರಿ ಮೂವರು ವಿದ್ಯಾರ್ಥಿಗಳು 625 ಅಂಕ ಪಡೆದು ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ಓರ್ವ ವಿದ್ಯಾರ್ಥಿನಿ ಸಾಧನೆ ಮಾಡಿದ್ದಾಳೆ.