ಕಾರವಾರ: ಕೋವಿಡ್ ಸೋಂಕು ಹರಡದಂತೆ ಎಲ್ಲೆಡೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಗಡಿ ಭಾಗದಲ್ಲಿ ಮಾತ್ರವಲ್ಲ , ಬಸ್ ಹಾಗೂ ರೈಲು ನಿಲ್ದಾಣದಲ್ಲಿ ಹೊರಗಿನಿಂದ ಬಂದವರ ಮಾಹಿತಿಯನ್ನು ಪಡೆದುಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈಗಾಗಲೇ ಜಿಲ್ಲೆಯ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಎಲ್ಲ ರೀತಿಯ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಮದುವೆ ಕಾರ್ಯಗಳಿಗೆ ನಿಗದಿತ 50 ಮಂದಿಗೆ ಮಾತ್ರ ಅವಕಾಶವಿದ್ದು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ.

ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತಿದ್ದು, ಪ್ರವಾಸಿಗರು ಸಹ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕ್ರಮಕೈಗೊಳ್ಳಲಾಗಿದೆ. ಗೋವಾದಿಂದ ಜಿಲ್ಲೆಗೆ ಆಗಮಿಸುವವರಿಗೆ 72 ಗಂಟೆಯೊಳಗಿನ ಕೋವಿಡ್ ನೆಗೆಟಿವ್ ರಿಪೋರ್ಟ್ ಅಥವಾ ಎರಡು ಡೋಸ್ ಕೋವಿಡ್ ಲಸಿಕೆ ಕಡ್ಡಾಯ ಮಾಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಆದೇಶದಲ್ಲಿ ಏನಿದೆ?

೧. ರಾಜ್ಯ ಸರ್ಕಾರವು ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುತ್ತೋಲೆ ಅನ್ವಯ ಕೇರಳ ಮತ್ತು ಮಹಾರಾಷ್ಟ್ರ ರಾಜ್ಯದಿಂದ ಬರುವಂತಹ ಜನರು ಕೋವಿಡ್ ಲಸಿಕೆಯ ಎರಡು ಡೋಸನ್ನು ಪಡೆದಿದ್ದರೂ/ಪಡೆಯದಿದ್ದರೂ 72 ಗಂಟೆಯೊಳಗೆ ಮಾಡಿಸಿರುವ RTPCR ಪರೀಕ್ಷೆಯ ನೆಗಟಿವ್ ವರದಿಯನ್ನು ಹೊಂದಿರುವುದು ಕಡ್ಡಾಯಗೊಳಿಸಿದ್ದು
ಇರುತ್ತದೆ.

RELATED ARTICLES  ಬಾಂಗ್ಲಾದೇಶ: ಭೀಕರ ಅಗ್ನಿ ದುರಂತ ; 69 ಜನರು ಸಜೀವ ದಹನ.

2. ರಾಜ್ಯ ಸರ್ಕಾರವು ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆದೇಶ ಆಯಾ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಸ್ಥಿತಿಗತಿಯನ್ನು ಆಧರಿಸಿ ಸೋಂಕಿನ ನಿಯಂತ್ರಣಕ್ಕಾಗಿ ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದು ಇರುತ್ತದೆ.

3. ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಹೊಂದಿಕೊಂಡಿರುವ ಗೋವಾ ರಾಜ್ಯದಿಂದ ಜಿಲ್ಲೆಗೆ ಬರುವಂತಹ ಜನರಿಗೆ ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದ ಬಗ್ಗೆ ಪ್ರಮಾಣ ಪತ್ರ ಅಥವಾ 72 ಗಂಟೆಯೊಳಗೆ ಮಾಡಿಸಿರುವ RTPCR ಪರೀಕ್ಷೆಯ ನೆಗಟಿವ್ ವರದಿಯನ್ನು ಹೊಂದಿರುವುದು ಕಡ್ಡಾಯಗೊಳಿಸಲು ದಿನಾಂಕ: 07-08-2021 ರಂದು ನಡೆದ ಕೋವಿಚ್ ನಿಯಂತ್ರಣ ಸಭೆಯಲ್ಲಿ ಮಾನ್ಯ ಸಚಿವರು ನಿರ್ದೇಶನ ನೀಡಿರುತ್ತಾರೆ.

4. ಮಾನ್ಯ ಸಚಿವರ ನಿರ್ದೇಶನದಂತ ಮತ್ತು ಕೋವಿಡ್ ಸೋಂಕಿನ ಪರಿಣಾಮಕಾರಿ ನಿಯಂತ್ರಣಕ್ಕಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ತ ನಾಳೆಯಿಂದ ವಿಪತ್ತು ನಿರ್ವಹಣಾ ಕಾಯಿದೆ 2005 ರ ಕಲಂ 34 ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಮುಲೈ ಮುಹಿಲನ್, ಭಾ.ಆ.ಸೇ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಉತ್ತರ ಕನ್ನಡ ಕಾರವಾರ ಆದ ನಾನು ಉತ್ತರ ಕನ್ನಡ ಜಿಲ್ಲೆಯಾದ್ಯಂತ ಪ್ರಚಲಿತದಲ್ಲಿರುವ ಸರ್ಕಾರದ ಮಾರ್ಗಸೂಚಿ ಹಾಗೂ ಈ ಕಾರ್ಯಾಲಯದಿಂದ ದಿನಾಂಕ: 04-08- 2021 ರಂದು ಹೊರಡಿಸಲಾದ ಮಾರ್ಗಸೂಚಿಯಗಳಿಗೆ ಹೆಚ್ಚುವರಿಯಾಗಿ ಈ ಕೆಳಕಂಡ ಕ್ರಮಗಳನ್ನು ಮುಂದಿನ ಆದೇಶದವರೆಗೆ ಕೈಗೊಳ್ಳಲು ಆದೇಶಿಸಿರುತ್ತೇನೆ. ಜಿಲ್ಲೆಗೆ ಗೋವಾ ರಾಜ್ಯದಿಂದ ಆಗಮಿಸುವಂತಹ ಜನರು ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದ ಬಗ್ಗೆ ಪ್ರಮಾಣ ಪತ್ರ ಅಥವಾ 72 ಗಂಟೆಯೊಳಗೆ ಮಾಡಿಸಿರುವ RTPCR ಪರೀಕ್ಷೆಯ ನೆಗಟಿವ್ ವರದಿಯನ್ನು ಹೊಂದಿರುವುದನ್ನು ಕಡ್ಡಾಯಗೊಳಿಸಿದೆ. ಈ ಬಗ್ಗೆ ತಪಾಸಣೆ ಮಾಡಲು ಗಡಿ ಭಾಗಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಿಸಿದ ಸಹಾಯಕ ಆಯುಕ್ತರಿಗೆ ತಿಳಿಸಿದೆ.
5. ಈ ಮೇಲಿನ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ವಿಭಾಗ 51 ರಿಂದ 60 ರನ್ವಯ, ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರನ್ವಯ ಹಾಗೂ ಸಾಂಕ್ರಾಮಿಕ ರೋಗ ಕಾಯ್ದೆ 2020 ರ ವಿಭಾಗ 4, 5 ಮತ್ತು 10 ರಂತೆ ಕ್ರಮಗಳನ್ನು ಜರುಗಿಸಲಾಗುವುದು.

RELATED ARTICLES  ರೈಲಿನಲ್ಲಿ ಮೊಬೈಲ್-ಎಟಿಎಂ ಕಾರ್ಡ್ ಕಳ್ಳತನ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

6. ಈ ಆದೇಶದ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಪೋಲಿಸ್ ಅಧೀಕ್ಷಕರು, ಉತ್ತರ ಕನ್ನಡ, ಕಾರವಾರಾವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಬದ್ಧರಾಗಿರುತ್ತಾರೆ.