ಕಾರವಾರ : ಉತ್ತರಕನ್ನಡದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ನಿನ್ನೆ ಕಡಿಮೆ ಪ್ರಕರಣ ಕಂಡಿದ್ದು, ಜನತೆ ಸಮಾಧಾನದಲ್ಲಿ ಜನರಿದ್ದರು. ಆದರೆ ಇಂದು ಮತ್ತೆ ಕೊರೋನಾ ಏರಿಕೆ ಕಂಡಿದೆ.
ಉತ್ತರಕನ್ನಡ ಜಿಲ್ಲಾಡಳಿತದ ಕೊರೋನಾ ಹೆಲ್ತ ಬುಲೆಟಿನ್ ನ ಪ್ರಕಾರ ರವಿವಾರ 68 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವುದಾಗಿ ವರದಿಯಾಗಿದೆ. ಹೆಲ್ತ ಬುಲೆಟಿನ್ ಪ್ರಕಾರ 3 ಸಾವಾಗಿದ್ದು ಅಂಕೋಲಾ ಹಾಗೂ ಹೊನ್ನಾವರ, ಶಿರಸಿಯಲ್ಲಿ ತಲಾ ಒಂದೊಂದು ಸಾವು ಸಂಭವಿಸಿದೆ. ಒಟ್ಟೂ ಸಾವಿನ ಸಂಖ್ಯೆ 743 ಕ್ಕೆ ಏರಿದೆ.
ಹೆಲ್ತ ಬುಲೆಟಿನ್ ಪ್ರಕಾರ ಕಾರವಾರದಲ್ಲಿ 16, ಅಂಕೋಲಾದಲ್ಲಿ 7, ಕುಮಟಾದಲ್ಲಿ 19, ಹೊನ್ನಾವರ 6, ಭಟ್ಕಳದಲ್ಲಿ 3, ಶಿರಸಿಯಲ್ಲಿ 8, ಸಿದ್ದಾಪುರದಲ್ಲಿ 1, ಯಲ್ಲಾಪುರದಲ್ಲಿ 2, ಮುಂಡಗೋಡ 6, ಹಳಿಯಾಳದಲ್ಲಿ 0, ಮತ್ತು ಜೋಯಿಡಾದಲ್ಲಿ 0 ಒಟ್ಟೂ 68 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 429 ಆಗಿದ್ದು, ಅವರಲ್ಲಿ 92 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 337 ಸೋಂಕಿತರು ಹೋಮ್ ಐಸೋಲೇಷನ್‌ನಲ್ಲಿದ್ದಾರೆ.
ಕಾರವಾರ 4, ಅಂಕೋಲಾ 29, ಕುಮಟಾ 11, ಹೊನ್ನಾವರ 10, ಭಟ್ಕಳ 8, ಶಿರಸಿ 16, ಸಿದ್ದಾಪುರ 0, ಯಲ್ಲಾಪುರ 0, ಮುಂಡಗೋಡ 0, ಹಳಿಯಾಳ 0, ಜೋಯ್ಡಾ 0 ಕೊರೋನಾ ಗೆದ್ದಿದ್ದಾರೆ. ಅಂದರೆ ಒಟ್ಟೂ 78 ಜನ ಇಂದು ಕೊರೋನಾ ಗೆದ್ದು ಬಂದವರಾಗಿದ್ದಾರೆ.
ಕರೋನಾ ಹೆಲ್ತ್ ಬುಲೆಟಿನ್ ಪ್ರಕಾರ ಅಂಕೋಲಾ ಹಾಗೂ ಕುಮಟಾದಲ್ಲಿ ಅತಿ ಹೆಚ್ಚು ಅಂದರೆ 19 ಜನರಲ್ಲಿ, ಕಾರವಾರ ಎರಡನೆಯ ಸ್ಥಾನ ಅಂದರೆ ತಲಾ 16 ಜನರಲ್ಲಿ ಕರೋನಾ ಕಾಣಿಸಿಕೊಂಡಿದೆ.
ಸಾಮಾಜಿಕ ಅಂತರ ಕಾಪಾಡುವ ಜೊತೆಗೆ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಬೇಕಾಬೆಟ್ಟಿ ತಿರುಗಾಡದೇ ನಿಮ್ಮ ಆರೋಗ್ಯದ ಬಗ್ಗೆ ನೀವೆ ಎಚ್ಚರವಹಿಸಿ ಇದುವೇ ಜನತೆಗೆ ನಮ್ಮ ಕಳಕಳಿಯ ಮನವಿ.