ಕಾರವಾರ : ಉತ್ತರಕನ್ನಡ ಜಿಲ್ಲಾಡಳಿತದ ಕೊರೋನಾ ಹೆಲ್ತ ಬುಲೆಟಿನ್ ನ ಪ್ರಕಾರ ಇಂದು 65 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವುದಾಗಿ ವರದಿಯಾಗಿದೆ. ಹೆಲ್ತ ಬುಲೆಟಿನ್ ಪ್ರಕಾರ ಇಂದು ಯಾವುದೇ ಸಾವು ಸಂಭವಿಸಿಲ್ಲ.

ಹೆಲ್ತ ಬುಲೆಟಿನ್ ಪ್ರಕಾರ ಕಾರವಾರದಲ್ಲಿ 14, ಅಂಕೋಲಾದಲ್ಲಿ 13, ಕುಮಟಾದಲ್ಲಿ 13, ಹೊನ್ನಾವರ 9, ಭಟ್ಕಳದಲ್ಲಿ 3, ಶಿರಸಿಯಲ್ಲಿ 5, ಸಿದ್ದಾಪುರದಲ್ಲಿ 0, ಯಲ್ಲಾಪುರದಲ್ಲಿ 4, ಮುಂಡಗೋಡ 3, ಹಳಿಯಾಳದಲ್ಲಿ 1, ಮತ್ತು ಜೋಯಿಡಾದಲ್ಲಿ 0 ಒಟ್ಟೂ 65 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

RELATED ARTICLES  ರಾಜಕೀಯ ದೂರವಿಟ್ಟು ಅಭಿವೃದ್ಧಿ ಮಾಡೋಣ -ರತ್ನಾಕರ ನಾಯ್ಕ ಆಶಯ

ಜಿಲ್ಲೆಯಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 467 ಆಗಿದ್ದು, ಅವರಲ್ಲಿ 107 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 360 ಸೋಂಕಿತರು ಹೋಮ್ ಐಸೋಲೇಷನ್‌ನಲ್ಲಿದ್ದಾರೆ.

ಕಾರವಾರ 6, ಅಂಕೋಲಾ‌ 11, ಕುಮಟಾ 13, ಹೊನ್ನಾವರ 11, ಭಟ್ಕಳ 2, ಶಿರಸಿ 6, ಸಿದ್ದಾಪುರ 0, ಯಲ್ಲಾಪುರ 5, ಮುಂಡಗೋಡ 0, ಹಳಿಯಾಳ 0, ಜೋಯ್ಡಾ 2 ಜನ ಕೊರೋನಾ ಗೆದ್ದಿದ್ದಾರೆ. ಅಂದರೆ ಒಟ್ಟೂ 56 ಜನ ಇಂದು ಕೊರೋನಾ ಗೆದ್ದು ಬಂದವರಾಗಿದ್ದಾರೆ.

RELATED ARTICLES  ದಸರಾ ಸ್ಪೆಷಲ್ ಸುವಿಧಾ ಎಕ್ಸ್‌ಪ್ರೆಸ್ ರೈಲನ್ನು ಕಾರವಾರದ ತನಕವೂ ಓಡಿಸಲು ನೈರುತ್ಯ ರೇಲ್ವೆ ಅನುಮತಿ

ಕರೋನಾ ಹೆಲ್ತ್ ಬುಲೆಟಿನ್ ಪ್ರಕಾರ ಕಾರವಾರದಲ್ಲಿ ಅತಿ ಹೆಚ್ಚು ಅಂದರೆ 14 ಜನರಲ್ಲಿ, ಕುಮಟಾ, ಅಂಕೋಲಾ ಎರಡನೆಯ ಸ್ಥಾನ ಅಂದರೆ ತಲಾ 13 ಜನರಲ್ಲಿ ಕರೋನಾ ಕಾಣಿಸಿಕೊಂಡಿದೆ.

ಸಾಮಾಜಿಕ ಅಂತರ ಕಾಪಾಡುವ ಜೊತೆಗೆ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಬೇಕಾಬೆಟ್ಟಿ ತಿರುಗಾಡದೇ ನಿಮ್ಮ ಆರೋಗ್ಯದ ಬಗ್ಗೆ ನೀವೆ ಎಚ್ಚರವಹಿಸಿ ಇದುವೇ ಜನತೆಗೆ ನಮ್ಮ ಕಳಕಳಿಯ ಮನವಿ.