ಬೆಂಗಳೂರು : ಕೊರೋನಾ ಎರಡನೆಯ ಅಲೆ ಹಾಗೂ ಮೂರನೇ ಅಲೆಗಳ ನಡುವೆ ಹಬ್ಬ-ಹರಿದಿನಗಳ ಆಚರಣೆ ಹೇಗೆ ಎಂಬ ಬಗ್ಗೆ ಜನರು ನಿಖರವಾದ ಮಾಹಿತಿ ಇಲ್ಲದೆ ಗೊಂದಲದಲ್ಲಿದ್ದರು ಆದರೆ ಈ ಕುರಿತು ಅಧಿಕೃತ ಮಾಹಿತಿ ಹೊರಬಿದ್ದಿದೆ. ಇದೀಗ ಗೌರಿ ಗಣೇಶ ಹಬ್ಬ, ಮೊಹರಂ ಸೇರಿದಂತೆ ಧಾರ್ಮಿಕ ಹಬ್ಬ ಆಚರಣೆಗೆ ಮಾರ್ಗಸೂಚಿ ಪ್ರಕಟ ಮಾಡಿ ಇಂದು ಸರ್ಕಾರ ಆದೇಶ ಹೊರಡಿಸಿದೆ.
ದೇವಸ್ಥಾನ ಹೊರತುಪಡಿಸಿ ಸಾರ್ವಜನಿಕ ಸ್ಥಳಗಳಲ್ಲಿ, ಹೊರಾಂಗಣಗಳಲ್ಲಿ ಗೌರಿ-ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವಂತಿಲ್ಲ.ವಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯ ಮೆರವಣಿಗೆ, ಮನೋರಂಜನಾ ಕಾರ್ಯಕ್ರಮ ಆಯೋಜಿಸುವಂತಿಲ್ಲ.
ಪಾರಂಪರಿಕ ಗೌರಿ ಗಣೇಶ ಮೂರ್ತಿಯನ್ನು ಪೂಜಿಸುವುದು ಮತ್ತು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸಬೇಕು.ಅಥವಾ ಸಮೀಪದ ಜಿಲ್ಲಾಡಳಿತ ಸೂಚಿಸಿದ ಸ್ಥಳಗಳಲ್ಲಿ ವಿಸರ್ಜಿಸುವುದು ಖಡ್ಡಾಯವಾಗಿದೆ.
ಗಣೇಶ ಹಬ್ಬವನ್ನು ಆಚರಿಸುವ ಸಂಬಂಧದ ಮಾರ್ಗಸೂಚಿಗಳು.
1) ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಮ್ಮ ತಮ್ಮ ಮನೆಗಳಲ್ಲಿ ಆಚರಿಸತಕ್ಕದ್ದು, ಇದನ್ನು ಹೊರತುಪಡಿಸಿ, ಬೇರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ, ಹೊರಾಂಗಣಗಳಲ್ಲಿ ಚಪ್ಪರ/ಪೆಂಡಾಲ್/ಶಾಮಿಯಾನ ವೇದಿಕೆಗಳನ್ನು ನಿರ್ಮಿಸಿ ಗೌರಿ-ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವಂತಿಲ್ಲ.
2) ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯ ಮೆರವಣಿಗೆ, ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.
3) ಪಾರಂಪರಿಕ ಗೌರಿ-ಗಣೇಶ ಮೂರ್ತಿಯನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ
ವಿಸರ್ಜಿಸುವುದು ಅಥವಾ ಮೂರ್ತಿಗಳನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ /ಜಿಲ್ಲಾಡಳಿತ / ಹತ್ತಿರದ ಸ್ಥಳೀಯ ಸಂಸ್ಥೆಗಳ |
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ, ಕಲ್ಯಾಣಿ ಅಥವಾ ಮೊಬೈಲ್ ಟ್ಯಾಂಕ್‌ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‌ಗಳಲ್ಲಿ ವಿಸರ್ಜಿಸತಕ್ಕದ್ದು.
4) ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಮಾನಿಟೈಸೇಷನ್ ಮಾಡತಕ್ಕದ್ದು. ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾಧಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕಾನಿಂಗ್ ವ್ಯವಸ್ಥೆಯನ್ನು ಕಲ್ಪಿಸತಕ್ಕದ್ದು.
5) ದರ್ಶನಕ್ಕಾಗಿ ಬರುವ ಭಕ್ತರಿಗೆ ಕೋವಿಡ್-19 ಸಮುಚಿತ ವರ್ತನೆಯಂತೆ ಕಡ್ಡಾಯವಾಗಿ ಮುಖಗವಸನ್ನು ಧರಿಸುವುದು, ಕನಿಷ್ಠ 06 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು.
6) ಗಣೇಶೋತ್ಸವ ಆಚರಣೆ ಕಾಲಕ್ಕೆ ಸಂದರ್ಭಕ್ಕನುಗುಣವಾಗಿ ಸರ್ಕಾರ, ಜಿಲ್ಲಾಡಳಿತ, ಪೊಲೀಸ್, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ / ನಿರ್ದೇಶನ ಹಾಗೂ ಸೂಚನೆಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.
ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು ಎಂದು ಮಾಹಿತಿ ಲಭ್ಯವಾಗಿದೆ.