ಕುಮಟಾ: ಭಟ್ಕಳ ತಾಲ್ಲೂಕಿನ ಶಿರಾಲಿ ಜನತಾ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿನಿ ಛಾಯಾ ಪುರಾಣಿಕ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.83.68 ಅಂಕ ಗಳಿಸುವ ಮೂಲಕ ಸಾಧನೆ ಮಾಡಿದ್ದಾಳೆ.
ಈಕೆ ನೀರಕಂಟ-ಬಪ್ಪುಂದದ ನಿವಾಸಿ ಮಂಜುನಾಥ ಪುರಾಣಿಕ ಹಾಗೂ ಶ್ಯಾಮಲಾ ದಂಪತಿಯ ಪುತ್ರಿಯಾಗಿದ್ದಾಳೆ. ಕನ್ನಡದಲ್ಲಿ 115, ಇಂಗ್ಲೀಷ್ 84, ಹಿಂದಿ 88 ಸೇರಿದಂತೆ ಇತರೆ ಭಾಷೆಗಳಲ್ಲಿ ಕೂಡ ಉತ್ತಮ ಅಂಕಗಳಿಸಿ ಸಾಧನೆ ಮಾಡಿದ್ದಾಳೆ. ಜೊತೆಗೆ ತಾಲ್ಲೂಕಿನ ಟಾಪ್ 10ರಲ್ಲಿ ಗುರುತಿಸಿಕೊಂಡು ಗಮನ ಸೆಳೆದಿದ್ದಾಳೆ. ಈಕೆಗೆ ಶಾಲಾ ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿಗಳು ಹಾಗೂ ಕುಟುಂಬಸ್ಥರು, ಊರ ನಾಗರಿಕರು ಅಭಿನಂದನೆ ಸಲ್ಲಿಸಿದ್ದಾರೆ.