ಭಟ್ಕಳ: ತಾಲೂಕಿನ ಬಂದರ್ ರೋಡ್ ಸಮೀಪ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ವರದಿಯಾಗಿದೆ. ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಸಹ ಸವಾರ ಸಾವನ್ನಪ್ಪಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಭಟ್ಕಳ ಸಂಶುದ್ದೀನ್ ಸರ್ಕಲ್ ಕಡೆಯಿಂದ ಬಂದರ ಕಡೆಗೆ ಅತೀವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಬೈಕ್, ಭಟ್ಕಳದ ಸಂಶುದ್ದೀನ ಸರ್ಕಲ್ ಕಡೆಗೆ ಚಲಾಯಿಸಿಕೊಂಡು ಬರುತ್ತಿದ್ದ ಕಾರನ ಮುಂಬಾಗಕ್ಕೆ ಡಿಕ್ಕಿ ಹೊಡೆದು ಈ ಅಪಘಾತವಾಗಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಸಹಸವಾರ ಮಹ್ಮದ ಹುಸೇನ ಬುಡನಗೇರಿ, ಆಜಾದ ನಗರ ಶೇಡಕುಳಿ ಹೊಂಡ ನಿವಾಸಿ ಎಂದು ತಿಳಿದು ಬಂದಿದೆ.
ಬೈಕ್ ಹಿಂದೆ ಮಧ್ಯದಲ್ಲಿ ಕುಳಿತಿದ್ದ ಮಹ್ಮದ್ ಹುಸೇನ ಈತನ ತಲೆಗೆ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದು ಹಾಗೂ ಬೈಕ್ ಹಿಂದೆ ಕೊನೆಯಲ್ಲಿ ಕುಳಿತುಕೊಂಡು ಅಬ್ದುಲ್ ರಹಮಾನ ಇವರಿಗೆ ಸಣ್ಣ ಪುಟ್ಟ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಈ ಬಗ್ಗೆ ಭಟ್ಕಳ ಶಹರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರ ಕನ್ನಡದ ಹಲವು ಕಡೆಗಳಲ್ಲಿ ದಿನನಿತ್ಯ ಒಂದಿಲ್ಲೊಂದು ಅಪಘಾತದ ಸುದ್ದಿಗಳು ವರದಿಯಾಗುತ್ತಿದೆ. ಜನರು ಎಚ್ಚರಿಕೆಯಿಂದ ವಾಹನ ಚಾಲನೆ ಮಾಡುವ ಹಾಗೂ ರಸ್ತೆಯ ನಿಯಮಾವಳಿಗಳನ್ನು ಪಾಲಿಸುವಂತೆ ಅಧಿಕಾರಿಗಳು ಆಗಾಗ ವಿನಂತಿಸಿದ್ದಾರೆ.