ಕಾರವಾರ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ 2021-22ನೇ ಸಾಲಿನ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾ ಕೀರ್ತನ ಮತ್ತು ಗಮಕ ಕಲಾ ಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16-24 ವರ್ಷ ವಯೋಮಾನದವರು ಅರ್ಜಿ ಸಲ್ಲಿಸಬಹುದು. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ 10 ಸಾವಿರ ರೂ.ಶಿಷ್ಯವೇತನ ನೀಡಲಾಗುವುದು. ಒಬ್ಬರು ಒಮ್ಮೆ ಮಾತ್ರ ಶಿಷ್ಯವೇತನ ಪಡೆಯಬಹುದಾಗಿದ್ದು, ಸೆ.17ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ಅಕಾಡೆಮಿಯ https://sangeetanrityaacademy. Karnataka.gov.in ನಲ್ಲಿ ಸಲ್ಲಿಸಬಹುದು.
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಹೆಸರಿನ ಫೇಸ್ಟುಕ್ ಪುಟದಲ್ಲಿ ಮತ್ತು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಅರ್ಜಿ ಪಡೆಯಬಹುದು. ಮಾಹಿತಿಗಾಗಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಕನ್ನಡ ಭವನ, 2ನೇ ಮಹಡಿ, ಜೆ ಸಿ ರಸ್ತೆ ಬೆಂಗಳೂರು ದೂ: 080 22215072ಕ್ಕೆ ಸಂಪರ್ಕಿಸುವಂತೆ ಅಕಾಡೆಮಿಯ ರಿಜಿಸ್ಟಾರ್ ಎನ್.ನಮ್ರತಾ ತಿಳಿಸಿದ್ದಾರೆ.