ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದಲ್ಲಿ ಮತ್ತೆ ಮಳೆ ಶುರುವಾಗಿದೆ. ಕರ್ನಾಟಕದಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಆ. 26ರವರೆಗೆ ಮಳೆ (Rain in Karnataka) ಹೆಚ್ಚಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರ್ನಾಟಕದ ಬಹುತೇಕ ಕಡೆ ಮಳೆಯ ತೀವ್ರತೆ (Heavy Rain) ಹೆಚ್ಚಾಗಲಿದೆ. ಇಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುರುವಾರದವರೆಗೂ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.

ಶ್ರೀಲಂಕಾದ ಕಡಲ ತೀರದಲ್ಲಿ ಸುಳಿಗಾಳಿ ಉಂಟಾಗಿದೆ. ಕರ್ನಾಟಕದಲ್ಲಿ ಆ. 26ರವರೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ಈ ಜಿಲ್ಲೆಗಳಲ್ಲಿ ಇನ್ನೂ 3 ದಿನ ಹಗುರ ಮಳೆಯಾಗಲಿದೆ.

RELATED ARTICLES  ಬೆಂಗಳೂರು ನಗರದಲ್ಲಿ ಈಗಿರುವ 12 ಮಂದಿ ಬಿಜೆಪಿ ಶಾಸಕರಿಗೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್.!

ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಈ 9 ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ 3 ದಿನ ಮಳೆ ಹೆಚ್ಚಾಗಲಿದ್ದು, ಕರಾವಳಿಯಲ್ಲಿ ಮಳೆಯ ತೀವ್ರತೆ ಜಾಸ್ತಿಯಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ.

ಈ ಬಾರಿ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿಯೂ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ದಕ್ಷಿಣ ಒಳನಾಡಿನ 16 ಜಿಲ್ಲೆಯ ಪೈಕಿ 10 ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಕರಾವಳಿಯ ಮೂರು ಜಿಲ್ಲೆಯಲ್ಲಿಯೂ ಮಳೆ ಕಡಿಮೆಯಾಗಿದೆ. ಕರಾವಳಿಯಲ್ಲಿ ವಾಡಿಕೆಗಿಂತ ಶೇ.18 ಕಡಿಮೆ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಶೇ.31 ಮತ್ತು ದಕ್ಷಿಣ ಒಳನಾಡಿನಲ್ಲಿ ಶೇ.7ರಷ್ಟು ಮಳೆ ಹೆಚ್ಚಾಗಿದೆ. ಕಳೆದ ವಾರ ಉತ್ತರ ಕನ್ನಡ, ರಾಯಚೂರು, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯ ಕೊರತೆ ಹೆಚ್ಚಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಮತ್ತು ತುಮಕೂರು ಜಿಲ್ಲೆಯಲ್ಲಿ ಮಳೆಯ ಕೊರತೆಯಾಗಿದೆ. ಬೆಳಗಾವಿ, ಯಾದಗಿರಿ, ದಾವಣಗೆರೆ ಮತ್ತು ಮೈಸೂರು ಜಿಲ್ಲೆಯಲ್ಲಿ ವಾಡಿಕೆಯ ಮಳೆಯಾಗಿದೆ. ಚಿತ್ರದುರ್ಗ ಮತ್ತು ಚಾಮರಾಜನಗರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.

RELATED ARTICLES  ಜನರ ಪರಿಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ದೇವರ ಕೆಲಸದಂತೆ ಕಾರ್ಯಮಾಡಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ವಾರದಿಂದ ಮಳೆಯ ಆರ್ಭಟ ಹೆಚ್ಚಾಗಿದೆ.