ಕುಮಟಾ: ಮೀನು ಲಾರಿ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿ 24 ಗಂಟೆ ಕಳೆಯುವುದರೊಳಗಾಗಿ ಇನ್ನೊಂದು ಬಸ್ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಚಾಲಕ ಗಂಭೀರವಾಗಿ ಗಾಯ ಗೊಂಡಿರುವ ಘಟನೆ ಸಂಭವಿಸಿದೆ.

ತಾಲೂಕಿನ ದುಂಡಕುಳಿ ಸಮೀಪ ಮಿನಿಲಾರಿ ಮತ್ತು ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿ, ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

RELATED ARTICLES  ಸಿಂಪಲ್ಲಾಗಿ ರಜಿಸ್ಟರ್ ಮ್ಯಾರೇಜ್ ಆದ ಪ್ರಿಯಾಮಣಿ

ಈ ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಹಾಗೂ ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕುಮಟಾದಿಂದ‌ ಖಂಡಗಾರ ಕಡೆಗೆ ಹೋಗುತ್ತಿದ್ದ ಬಸ್, ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಲಾರಿ ಚಾಲಕ ಗಂಭೀರ ಗಾಯವಾಗಿದ್ದು, ಆಂಬುಲೆನ್ಸ್ ಮೂಲಕ ಆಸ್ಪತೆಗೆ ದಾಖಲಿಸಲಾಗಿದೆ.

RELATED ARTICLES  ಉತ್ತರ ಕನ್ನಡದ ಪ್ರಮುಖ ಸುದ್ದಿಗಳು

ಬಸ್ ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಕುಮಟಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಪುಟ್ಟ ಗಾಯಗಳಾಗಿರುವವರಿಗೆ ಚಿಕಿತ್ಸೆ ಕೊಡಿಸಲಾಗಿದೆ.