ಬೆಂಗಳೂರು : ರಾಜ್ಯದಲ್ಲಿ ಆಗಸ್ಟ್ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ಇಂದೂ ಸಹ ಮಳೆ ಮುಂದುವರೆಯಲಿದೆ. ನಿನ್ನೆ ಬೆಂಗಳೂರು ಸೇರಿದಂತೆ ಹಲವೆಡೆ ಭಾರೀ ಮಳೆ ಸುರಿದಿದೆ. ಇಂದಿನಿಂದ ಆಗಸ್ಟ್​ 30ರವರೆಗೂ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

RELATED ARTICLES  ಡಿ. 29ರಂದು “ಭಜನಾ ಸಪ್ತಾಹ” ಕಾರ್ಯಕ್ರಮ

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಆರೆಂಜ್ ಹಾಗೂ ಹಳದಿ ಅಲರ್ಟ್​ ಘೋಷಿಸಲಾಗಿದೆ. ಉಳಿದಂತೆ ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಹೆಚ್ಚು ಮಳೆಯಾಗಲಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಒಟ್ಟು 16 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 30ರವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

RELATED ARTICLES  ಕರ್ನಾಟಕ ಹೈಕೋರ್ಟ್ ಕಾನೂನು ಗುಮಾಸ್ತ ಕಮ್ ಸಂಶೋಧನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಾತ್ರವಲ್ಲದೇ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲೂ ಮಳೆ ಸುರಿಯಲಿದೆ ಎನ್ನಲಾಗಿದೆ.