ಭಟ್ಕಳ: ಎರಡು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಗರದ ನವಾಯತ್ ಕಾಲೋನಿಯ ಅಮೀನುದ್ದೀನ್ ರಸ್ತೆಯಲ್ಲಿ ನಡೆದಿರುವ ಬಗ್ಗೆ ವರದೊಯಾಗಿದೆ.

ಬದ್ರಿಯಾ ಕಾಲೋನಿಯ ಇಮ್ರಾನ್ ಕ ಮಹಮದ್ ಜಾಫರ್ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಇಮ್ರಾನ್ ತನ್ನ ಪತ್ನಿ ಮತ್ತು ಆತನ ಎಂಟು ತಿಂಗಳ ಮಗಳೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

RELATED ARTICLES  ಊಟಕ್ಕೆ ಕುಳಿತಲ್ಲಿಯೇ ಕೊನೆಯುಸಿರೆಳೆದ ಮಹಿಳೆ.

ಎದುರಿನ ಬೈಕ್ ಸವಾರ ಅಪಘಾತದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾನೆ ಅಪಘಾತ ನಡೆದಾಗ ಗಂಭೀರ ಗಾಯಗೊಂಡ ಇಮ್ರಾನನ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಉಡುಪಿ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ‌.

RELATED ARTICLES  ಪರೇಶ್ ಮೇಸ್ತಾರನ್ನು ಸ್ಮರಿಸಿದ ಶಾಸಕ‌ ಸುನೀಲ್‌ ನಾಯ್ಕ: ಅವರ ಬಗ್ಗೆ ಬರೆದಿದ್ದೇನು ಗೊತ್ತಾ?

ಬೈಕ್ ಅಪಘಾತದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು, ಸ್ಥಳೀಯರು ಹಾಗೂ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಮುಂದಿನ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.