ಬೆಂಗಳೂರು: ಶೇ.2ಕ್ಕಿಂತ ಕಡಿಮೆ ಕೊರೊನಾ ಪಾಸಿಟಿವಿಟಿ ದರ ಕಡಿಮೆ ಇರುವ ತಾಲೂಕುಗಳಲ್ಲಿ ಸೆಪ್ಟೆಂಬರ್ 6 ನೇ ತಾರೀಖಿನಿಂದ 6 ರಿಂದ 8 ನೇ ತರಗತಿ ಆರಂಭಿಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ದಿನ ಬಿಟ್ಟು ದಿನ ತರಗತಿಗಳು ನಡೆಯಲಿವೆ ಎಂದು ಮಾಹಿತಿ ಲಭ್ಯವಾಗಿದೆ.

ಸೋಮವಾರದಿಂದ ಶುಕ್ರವಾರದವರೆಗೆ ಶಾಲೆ ನಡೆಯಲಿದ್ದು, ಶನಿವಾರ ಮತ್ತು ಭಾನುವಾರ ಶಾಲೆಗಳ ಸ್ಯಾನಿಟೈಸಿಂಗ್ ಕೆಲಸ ಮಾಡಲಾಗುವುದು. ಕೇರಳದಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಅಲ್ಲಿಂದ ಬರುವ ಜನರಿಗೆ ಏಳು ದಿನ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುವುದು. ಏಳು ದಿನಗಳ ಬಳಿಕ ಕೋವಿಡ್ ಪರೀಕ್ಷೆ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ಕೇರಳ ಗಡಿಯಲ್ಲಿರುವ ದಕ್ಷಿಣ ಕನ್ನಡ, ಕೊಡಗಿನಲ್ಲಿ ನಿರ್ಬಂಧ ಮುಂದುವರಿಯಲಿದೆ. ಆಗಸ್ಟ್ 23ರಿಂದ 9-12ನೇ ಕ್ಲಾಸ್ ಪ್ರಾರಂಭಿಸಲಾಗಿತ್ತು. ಇದೀಗ 6ರಿಂದ 8ನೇ ತರಗತಿಗಳನ್ನ ಪ್ರಾರಂಭಿಸಲು ಗ್ರೀನ್ ಸಿಗ್ನಲ್ ಸಿಕ್ಕಿದೆ.

RELATED ARTICLES  ವಿಶ್ವ ಕ್ಷಯರೋಗ ನಿರ್ಮೂಲನ ದಿನಾಚರಣೆಯ ನಿಮಿತ್ತ ಜಾಗೃತಿ ಕಾರ್ಯಕ್ರಮ .

ಇನ್ನುಳಿದಂತೆ ಉಡುಪಿ, ಚಿಕ್ಕಮಗಳೂರು, ಮೈಸೂರು, ಹಾಸನ, ಕೋಲಾರ, ಕಲಬುರಗಿಗಳಲ್ಲಿ ಕೋವಿಡ್ ಸೋಂಕು ಹರಡುವಿಕೆ ಪ್ರಮಾಣ ಶೇ.1.5ಕ್ಕಿಂತ ಕಡಿಮೆ ಇರುವ ಕಾರಣ ವೀಕೆಂಡ್ ಕರ್ಫ್ಯೂ ತೆರವುಗೊಳಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಯಲಿದೆ. ಮದುವೆ ಸಮಾರಂಭಕ್ಕೆ ಶೇ. 50 ರಷ್ಟು ಅನುಮತಿ ನೀಡಲಾಗಿದೆ. ಕಲ್ಯಾಣ ಮಂಟಪಗಳಲ್ಲಿ ಗರಿಷ್ಠ 400 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಸಂಬಂಧ ಕಲ್ಯಾಣ ಮಂಟಪಗಳ ಮಾಲೀಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.

RELATED ARTICLES  ನಿಮ್ಮ ಜನ್ಮರಾಶಿಗೆ ಅನುಗುಣವಾಗಿ (ದಿನಾಂಕ 15-01-2019) ಇಂದಿನ ದಿನ ಫಲಾನುಫಲಗಳು ಹೇಗಿರಲಿದೆ ಗೊತ್ತೆ?