ಭಟ್ಕಳ : ಮಾನಸಿಕ ಒತ್ತಡಕ್ಕೆ ಸಿಲುಕಿದ ವ್ಯಕ್ತಿಯೋರ್ವ ಮನೆಯವರು ಯಾರೂ ಇರದ ಸಂದರ್ಭ ನೋಡಿಕೊಂಡು ಮನೆಯ ಸೀಲಿಂಗ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಶಿರಾಲಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು 58 ವರ್ಷ ವಯೋಮಾನದ ಮಾದೇವ ಸಣ್ಣಮಂಜು ನಾಯ್ಕ ಎಂದು ಗುರುತಿಸಲಾಗಿದೆ. ಮನೆಯವರೆಲ್ಲರೂ ಸಂಬಂಧಿಕರ ಮನೆಗೆ ತೆರಳಿ ವಾಪಸ್ಸಾಗುವಷ್ಟರಲ್ಲಿ ಅವಘಡ ಸಂಭವಿಸಿದೆ ಎನ್ನಲಾಗಿದೆ.

RELATED ARTICLES  ಶ್ರೀ ಶ್ರೀ ಭಾಗ್ಯಶ್ರೀ ಮಾತಾಜಿಯವರಿಗೆ ಗೋಕರ್ಣ‌ ಗೌರವ

ಇವರು ಕಳೆದ 2 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ಈ ಕುಕೃತ್ಯ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್ಯೆ ಭರತ್ ತನಿಖೆ ಕೈಗೊಂಡಿದ್ದಾರೆ. ತನಿಖೆಯ ನಂತರದಲ್ಲಿ ಇತರೇ ಮಾಹಿತಿಗಳು ಲಭ್ಯವಾಗಲಿದೆ.

RELATED ARTICLES  ಉತ್ತರ ಕನ್ನಡದಲ್ಲಿಯೂ ಭೂಕಂಪನ ಅನುಭವ : ಡೈನಮೈಟ್ ಸ್ಪೋಟದ ಪರಿಣಾಮವೇ?