ಕಾರವಾರ: ಉತ್ತರ ಕನ್ನಡದ ವಿವಿಧ ತಾಲ್ಲೂಕುಗಳಲ್ಲಿ ಪ್ರತಿದಿನ ಒಂದಿಲ್ಲೊಂದು ಅಪಘಾತ ಪ್ರಕರಣಗಳು ವರದಿಯಾಗುತ್ತಿದೆ. ಇಂದೂ ಸಹ ಸೊಸೆಯ ಸ್ಕೂಟಿಯ ಮೇಲೆ ಹೋಗುತ್ತಿದ್ದ ಅತ್ತೆ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ವರದಿ ಲಭ್ಯವಾಗಿದೆ.
ಅತ್ತೆ-ಸೊಸೆ ಸ್ಕೂಟಿಯಲ್ಲಿ ಸಂಚರಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿ ಹಿಂಬದಿ ಕುಳಿತಿದ ಅತ್ತೆ ಆಯ ತಪ್ಪಿ ಬಿದ್ದು, ಸಾವನ್ನಪ್ಪಿದ ಘಟನೆ ನಡೆದಿರುವುದು ಕಾರವಾರ ತಾಲೂಕಿನ ಆರ್ಗಾದ ರಾಷ್ಟ್ರೀಯ ಹೆದ್ದಾರಿಯಲ್ಲಿ.
ನಗರದ ಬಾಡಾದ ನಂದನಗದ್ದಾ ನಿವಾಸಿ ಶಾಲಿನಿ ನಾಯ್ಕ ಮೃತಪಟ್ಟ ಮಹಿಳೆ ಈಕೆಗೆ 73 ವರ್ಷ ವಯಸ್ಸಾಗಿತ್ತು. ಈಕೆ ತನ್ನ ಸೊಸೆ ವೈಶಾಲಿ ನಾಯ್ಕ ಜೊತೆ ಸ್ಕೂಟಿ ಹಿಂಬದಿ ಕುಳಿತು ಅರ್ಗಾದ ನೌಕಾನೆಲೆ ಬಳಿ ಕೆಲ ಸಾಮಗ್ರಿ ತರಲು ತೆರಳಿದ್ದರು ಎನ್ನಲಾಗಿದೆ.
ಅಂಗಡಿಯಿಂದ ಸಾಮಗ್ರಿ ಖರೀದಿಸಿ ವಾಪಸ್ಸಾಗುತ್ತಿದ್ದ ವೇಳೆ ನೌಕಾನೆಲೆ ಗೇಟ್ ಬಳಿ ರಸ್ತೆಯಲ್ಲಿ ಸ್ಕೂಟಿಯಿಂದ ಆಯ ತಪ್ಪಿ ಕೆಳಕ್ಕೆ ಬಿದ್ದಿದ್ದಾಳೆ. ಈವೇಳೆ ಗಂಭೀರ ಗಾಯಗೊಂಡ ಶಾಲಿನಿ ಮೃತಪಟ್ಟಿದ್ದಾಳೆ. ಇನ್ನು ಘಟನೆ ಸಂಬಂಧ ಕಾರವಾರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಹನ ಚಲಾವಣೆ ಸಂದರ್ಭದಲ್ಲಿ ನಿಯಮ ಪಾಲನೆ ಹಾಗೂ ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದ್ದು ಎಲ್ಲ ನಿಯಮಗಳನ್ನು ಪಾಲಿಸುವಂತೆ ಪೊಲೀಸ್ ಅಧಿಕಾರಿಗಳು ವಿನಂತಿಸಿದ್ದಾರೆ.