ಕಾರವಾರ: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 5 ಮತ್ತು 6ರಂದು ಗುಡುಗು ಸಹಿತ ವ್ಯಾಪಕ ಮಳೆಯನ್ನು ನಿರೀಕ್ಷಿಸಲಾಗಿದ್ದು, ಹಲವು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

RELATED ARTICLES  ಮಳೆಯ ಮುನ್ಸೂಚನೆ : 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬಾಗಲಕೋಟೆ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ‌ ಜಿಲ್ಲೆಗಳಲ್ಲಿ ಸೆ.6ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಈ ಜಿಲ್ಲೆಗಳಿಗೂ ಕೂಡ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನೈರುತ್ಯ ಮುಂಗಾರು ಕರಾವಳಿಯಲ್ಲಿ ಚುರುಕಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಹಾಗೂ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ಕರಾವಳಿಯ ಬಹುತೇಕ ಎಲ್ಲ ಸ್ಥಳಗಳಲ್ಲಿ ವ್ಯಾಪಕ ಮಳೆಯಾಗಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಕೆಲವೆಡೆ ಮಾತ್ರ ಮಳೆಯಾಗಿದೆ.

RELATED ARTICLES  ಏಪ್ರಿಲ್ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ?