ಭಟ್ಕಳ: ತಾಲೂಕಿನ ರೈಲ್ವೆ ನಿಲ್ದಾಣದಲ್ಲಿ ಕುಟುಂಬದ ಸಮೇತ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಮೃತ ವ್ಯಕ್ತಿ ರತ್ನಾಕರ ಖಾರ್ವಿ ಎಂದು ಗುರುತಿಸಲಾಗಿದ್ದು, ಈತ ಕುಂದಾಪುರದ ಗಂಗೊಳ್ಳಿ ನಿವಾಸಿ ಎಂದು ತಿಳಿದು ಬಂದಿದೆ. ಇವರು ತಮ್ಮ ಪತ್ನಿ ಹಾಗೂ ಮಗನೊಂದಿಗೆ ಮುಂಬೈನಲ್ಲಿ ವಾಸವಾಗಿದ್ದವರಾಗಿದ್ದುವರು ಎಂಬ ಮಾಹಿತಿ ಲಭ್ಯವಾಗಿದೆ.
ಅಲ್ಲಿನ ದೈನಿಕ ಭಾಸ್ಕರ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು. ತನ್ನ ತಂದೆಯ ಕಾರ್ಯ ಇರುವುದರಿಂದ ಮುಂಬೈಯಿಂದ ಗಂಗೊಳ್ಳಿಗೆ ರೈಲಿನಲ್ಲಿ ತನ್ನ ಪತಿ ಹಾಗೂ ಮಗನೊಂದಿಗೆ ತೆರಳುವ ವೇಳೆ ರೈಲಿನಲ್ಲಿ ಹ್ರದಯಾಘಾತ ಉಂಟಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ನಂತರ ಅವರ ಮೃತ ದೇಹವನ್ನು ಭಟ್ಕಳ ತಾಲೂಕಾಸ್ಪತ್ರೆಗೆ ಸಾಗಿಸಿದ್ದಾರೆ. ಮುಂದಿನ ಪ್ರಕ್ರಿಯೆ ಕೈಗೊಂಡ ಬಗ್ಗೆ ವರದಿಯಾಗಿದೆ.