ಕಾರವಾರ: ಹೊನ್ನಾವರ ತಾಲೂಕಿನ ವ್ಯಾಪ್ತಿಯಲ್ಲಿ
ಅರಬ್ಬಿ ಸಮುದ್ರದಲ್ಲಿ ಕಾಸರಕೋಡ ಟೊಂಕಾದ ಅಳಿವೆ ಪ್ರದೇಶದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಸಮುದ್ರದಲ್ಲಿ ಮುಳುಗಡೆಯಾದ ಘಟನೆ ನಡೆದಿದೆ.
ಶ್ರೀ ಕೃಷ್ಣ ಭಂಡಾರಿ ಹೆಸರಿನ ಶಿವರಾಮ ಶ್ರೀಯಾನ್ ಮಾಲಕತ್ವದ ಬೋಟ್ ಇದಾಗಿದ್ದು ಬೋಟ್ ಮುಳುಗಡೆಯಿಂದ ಲಕ್ಷಾಂತರ ರುಪಾಯಿ ಮೌಲ್ಯದ ವಸ್ತುಗಳ ನಷ್ಟವಾಗಿದೆ.
ಬೋಟ್ ಇಂದು ಬೆಳಗ್ಗೆ ಹೊನ್ನಾವರದ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು ಬರುವ ಮಧ್ಯದಲ್ಲಿ ಅಳವೆ ಪ್ರದೇಶದಲ್ಲಿ ಹೂಳು ತುಂಬಿದ್ದರಿಂದ ಇಂಜಿನ್ ಗೆ ಸಮಸ್ಯೆಯಾಗಿ ಮುಳುಗಡೆ ಆಗಿದೆ.
ಬೋಟ್ ನಲ್ಲಿದ್ದ 6 ಜನ ಮೀನುಗಾರರನ್ನು ಕರಾವಳಿ ಕಾವಲು ಪಡೆ ಪೊಲೀಸರು ಹಾಗೂ ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ.