ಹೊನ್ನಾವರ: ಯಾವುದೋ ವಿಷಯ ಮನಸ್ಸಿಗೆ ಹಚ್ಚಿಕೊಂಡು ಯುವಕನೋರ್ವ ತನ್ನ ಮನೆಯ ಬೆಡ್ ರೂಮ್‌ನಲ್ಲಿರುವ ಸೀಲಿಂಗ್ ಫ್ಯಾನ್‌ಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾನೆ. ತಾಲೂಕಿನ ಕಡತೋಕ ಹೆಗಡೆಕೊಪ್ಪದ ಭೂಷಣ ಭಂಡಾರಿ ಮೃತ ಯುವಕ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

RELATED ARTICLES  ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾಗಿ ಕೃಷ್ಣಾ ಹರಿಜನ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಗೋಕರ್ಣ: ಯುವಕಯೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕುಮಟಾ ತಾಲೂಕಿನ ತಲಗೇರಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಕುಮಟಾ ತಾಲೂಕಿನ ತಲಗೇರಿಯ ನಿತಿನ ಆಗೇರ ಆತ್ಮಹತ್ಯೆಗೆ ಯತ್ನಿಸಿದ ಯುವಕನಾಗಿದ್ದಾನೆ. ಈತ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಕ್ರಿಮಿನಾಶಕ ಸೇವಿಸಿದ್ದಾನೆ ಎನ್ನಲಾಗಿದ್ದು, ಕೆಲ ಸಮಯದ ನಂತರ ಅಸ್ವಸ್ಥಗೊಂಡಿದ್ದನ್ನು ಗಮನಿಸಿದ ಮನೆಯವರು ತಕ್ಷಣ ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಜಿಲ್ಲಾ ಆಸ್ಪತ್ರೆಗೆ ಕಳಿಸಲಾಗಿದೆ.

RELATED ARTICLES  ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಭಕ್ತರು.