ನ್ಯೂಸ್ ಬ್ಯೂರೋ : ಗಣೇಶೋತ್ಸವ ಸಮಿತಿ ಸುತ್ತಿದ್ದರು ಸಾರ್ವಜನಿಕ ಗಣೇಶೋತ್ಸವದ ಆಚರಣೆ ಬಗ್ಗೆ ಇನ್ನೂ ಸ್ಪಷ್ಟವಾದ ಮಾಹಿತಿ ಇಲ್ಲದಿದ್ದು ಅನೇಕ ಗೊಂದಲಗಳಿಗೆ ಕಾರಣವಾಗಿತ್ತು. ಇದೀಗ ಕೋಟ್ಯಂತರ ಹಿಂದೂಗಳ, ಸಂಘಸಂಸ್ಥೆಗಳ ಒತ್ತಡಕ್ಕೆ ಸರ್ಕಾರ ಮಣಿದಿದೆ. ಕೊನೆಗೂ ಅಳೆದು ತೂಗಿ ಸಾರ್ವಜನಿಕ ಗಣೇಶೋತ್ಸವಕ್ಕೆ ಸರಕಾರ ಷರತ್ತುಬದ್ಧ ಅನುಮತಿ ನೀಡಿದೆ.
3 ದಿನಗಳ ಮಟ್ಟಿಗೆ ಗಣೇಶೋತ್ಸವ ಆಚರಿಸಲು ಇದೀಗ ಅನುಮತಿ ಸಿಕ್ಕಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಸಿಕ್ಕಿದೆಯಾದರೂ., ಎಲ್ಲೆಂದರಲ್ಲಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವಂತಿಲ್ಲ. ಬೀದಿಗೆ ಒಂದರoತೆ, ಊರಿಗೆ ಒಂದರoತೆ ಗಣೇಶ ಪ್ರತಿಷ್ಠಾಪಿಸುವಂತಿಲ್ಲ ಎಂದು ಕಟ್ಟುನಿಟ್ಟಾಗಿ ತಿಳಿಸಲಾಗಿದೆ. ಸರಳವಾಗಿ ಗಣೇಶ ಉತ್ಸವ ಆಚರಣೆ ಮಾಡಬೇಕು, ಊರಿಗೆ ಇಂತಿಷ್ಟೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಷರತ್ತು ವಿಧಿಸಲಾಗಿದೆ.ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ಅಲ್ಲದೆ, ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯವಾಗಿದೆ. ಬಿಬಿಎಂಪಿ, ಜಿಲ್ಲಾಡಳಿತ, ಅಥವಾ ಸಂಬoಧಿಸಿದ ತಾಲೂಕಾಡಳಿತ ಅನುಮತಿ ಪಡೆಯಲೇಬೇಕು ಎಂದು ಮಾಹಿತಿ ನೀಡಲಾಗಿದೆ. ಇನ್ನೊಂದು ಅಂಶ ಏನೆಂದರೆ, ಜಿಲ್ಲಾಡಳಿತಗಳು ಸೂಚಿಸುವ ಸ್ಥಳಗಳಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಇದೆ. ಆದರೆ, ಎಲ್ಲೂ ವೇದಿಕೆ ಕಾರ್ಯಕ್ರಮಗಳಿಗೆ , ಮನರಂಜನಾ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ ಎಂದು ಸಿಎಂ ತಿಳಿಸಿದ್ದಾರೆ.