ಕುಮಟಾ – ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ನಿಂದ ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ದಿಸಿದ್ದ ಪ್ರದೀಪ್ ನಾಯಕ ಹಾಗೂ ಬಿಜೆಪಿಯ, ಗೋಕರ್ಣ ಜಿ.ಪಂ ಮಾಜಿ ಸದಸ್ಯೆ ಗಾಯತ್ರಿ ಗೌಡ, ಬಿಜೆಪಿ ಮುಖಂಡ ಯಶೋಧರ ನಾಯ್ಕ, ಜಿಲ್ಲೆಯ ಜೆಡಿಎಸ್ & ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಮಾಜಿ ಸಚಿವ ಆರ್.ವಿ. ದೇಶಪಾಂಡೆ ,ಮಾಜಿ ಶಾಸಕಿ ಶಾರದಾ ಶೆಟ್ಟಿ, ಅವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲೆಯ ಡಿಸಿಸಿ ಅಧ್ಯಕ್ಷ ಭೀಮಣ್ಣ ನಾಯ್ಕ್, ಪ್ರಶಾಂತ್ ದೇಶಪಾಂಡೆ ಮತ್ತಿತರರು ಉಪಸ್ಥಿತರಿದ್ದರು.ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಮಿರ್ಜಾನ,ಗೋಕರ್ಣ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಗೆ ಭಾರೀ ಹಿನ್ನಡೆ ಉಂಟಾಗಿತ್ತು. ಆದ್ರೆ ಇದೀಗ ಈ ಭಾಗದಿಂದ ಬೇರೆ ಬೇರೆ ಪಕ್ಷದ ಇಬ್ಬರೂ ಜಿಲ್ಲಾ ಪಂಚಾಯತ ಸದಸ್ಯರು ಹಾಗೂ ಉದ್ಯಮಿ ಯಶೋಧರ ನಾಯ್ಕ ಕಾಂಗ್ರೆಸ್ ಸೇರ್ಪಡೆ ಕಾಂಗ್ರೆಸ್ ಗೆ ಇನ್ನಷ್ಟು ಬಲ ಬರಲಿದೆ.