ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸೆ. 17ರಂದು ಬೃಹತ್ ಕೊವಿಡ್ ಲಸಿಕಾ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಈಗಾಗಲೇ 8,70,708 ಜನರಿಗೆ ಮೊದಲನೇ ಡೋಸ್ ಲಸಿಕೆ ಹಾಗೂ 2,85,253 ಜನರಿಗೆ 2ನೇ ಡೋಸ್ ಲಸಿಕೆ ನೀಡಲಾಗಿದೆ. ಜಿಲ್ಲೆಯಲ್ಲಿ ಸುಮಾರು 1,20,000 ಫಲಾನುಭವಿಗಳು ಮೊದಲನೇ ಡೋಸ್ ಪಡೆದು 84 ದಿನ ಪೂರೈಸಿ 2ನೇ ಡೋಸ್ ಲಸಿಕೆಯನ್ನು ಪಡೆಯಲು ಅರ್ಹರಿದ್ದಾರೆ. ಸುಮಾರು 2 ಲಕ್ಷದಷ್ಟು ಜನರು ಮೊದಲನೇ ಡೋಸ್‍ನ್ನು ಪಡೆಯಲು ಬಾಕಿ ಇದೆ.
ಸೆ. 17 ರಂದು 350 ಲಸಿಕಾ ಕೇಂದ್ರಗಳಲ್ಲಿ ಸುಮಾರು 1 ಲಕ್ಷ ಜನರಿಗೆ ಲಸಿಕೆಯನ್ನು ನೀಡುವ ಗುರಿಯನ್ನು ಹೊಂದಿದ್ದು ಈ ದಿನದಂದು ಇದುವರೆಗೆ ಒಂದೂ ಡೋಸ್ ಲಸಿಕೆಯನ್ನು ಪಡೆಯದವರು ಹಾಗೂ ಮೊದಲನೇ ಡೋಸ್ ಕೋವಿಶಿಲ್ಡ್ ಲಸಿಕೆ ಪಡೆದು 84 ದಿನ ಪೂರೈಸಿರುವವರು ಹಾಗೂ ಮೊದಲನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 28 ದಿನ ಪೂರೈಸಿರುವವರು, ಗರ್ಭಿಣಿ ಸ್ತ್ರೀಯರು ಹಾಗೂ ಬಾಣಂತಿಯರು ಲಸಿಕೆಯನ್ನು ಪಡೆದುಕೊಂಡು ಕೋವಿಡ್ ಖಾಯಿಲೆಯಿಂದ ಉಂಟಾಗುಬಹುದಾದ ತೊಂದರೆಗಳಿಂದ ರಕ್ಷಿಸಿಕೊಳ್ಳಲು ವಿನಂತಿಸಿದೆ.
ಸಾರ್ವಜನಿಕರು ಯಾವುದೇ ಗೊಂದಲ ಮಾಡಿಕೊಳ್ಳದೆ, ಆಶಾ ಕಾರ್ಯಕರ್ತೆಯರು, ತಾಲೂಕಾ ಆರೋಗ್ಯ ಸಿಬ್ಬಂದಿಗಳಿoದ ಮಾಹಿತಿ ಪಡೆದು , ಸಾಮಾಜಿಕ ಅಂತರ ಕಾಯ್ದುಕೊಂಡು ಲಸಿಕೆ ಪಡೆದುಕೊಳ್ಳಬೇಕಿದೆ. ಲಸಿಕೆ ಪಡೆಯುವಲ್ಲಿ ಸುಖಾಸುಮ್ಮನೆ ಬಂದಲ ಸೃಷ್ಟಿಸುವುದು ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡಿದೆ ಕೊರೋನಾ ನಿಯಮಗಳನ್ನು ಮೀರುವಂತಹ ಕಾರ್ಯ ಮಾಡಬಾರದೆಂದು ಇದೇ ಸಂದರ್ಭದಲ್ಲಿ ಅಧಿಕಾರಿಗಳು ಜನರಲ್ಲಿ ವಿನಂತಿ ಮಾಡಿದ್ದಾರೆ.