ಮಂಗಳೂರು: ನಿಫಾ ಸೋಂಕಿನ ಶಂಕೆಯಲ್ಲಿ ಇಲ್ಲಿನ ವೆಸ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಕಾರವಾರದ ಮೂಲದ ಯುವಕನ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್‌ಕುಮಾರ್ ತಿಳಿಸಿದ್ದಾರೆ.

Taranga

Disha english

ಗೋವಾದಲ್ಲಿ ಆರ್ ಟಿ ಪಿ ಸಿ ಆರ್ ಕಿಟ್ ತಯಾರಿಸುವ ಪ್ರಯೋಗಾಲಯದಲ್ಲಿ ಮೈಕ್ರೋ ಬಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿರುವ ಈ ವ್ಯಕ್ತಿ, ಕಾರವಾರದಲ್ಲಿರುವ ಮನೆಗೆ ಬೈಕ್ ನಲ್ಲಿ ಬರುವಾಗ ಮಳೆಯಲ್ಲಿ ನೆನೆದುಕೊಂಡು ಬಂದಿದ್ದರು. ಎರಡು ದಿನಗಳ ಹಿಂದೆ ಅವರಿಗೆ ಜ್ವರ ಬಂದಿತ್ತು. ಗೂಗಲ್ ಮಾಡಿದ್ದ ಅವರು, ಜ್ವರದ ಲಕ್ಷಣಗಳನ್ನು ಆಧರಿಸಿ, ನಿಫಾ ಎಂದು ಶಂಕಿಸಿ ಆಸ್ಪತ್ರೆ ಗೆ ದಾಖಲಾಗಿದ್ದರು. ಅವರ ಗಂಟಲು ದ್ರವ, ರಕ್ತ ಮತ್ತು ಮೂತ್ರ ಮಾದರಿಯನ್ನು ಸಂಗ್ರಹಿಸಿ, ಪುಣೆಯ ಪ್ರಯೋಗಾಲಯಕ್ಕೆ ತಪಾಸಣೆಗಾಗಿ ಕಳುಹಿಸಲಾಗಿತ್ತು.

RELATED ARTICLES  ಮುಳ್ಳೇರಿಯಾ ಮಂಡಲಾಂತರ್ಗತ ನೀರ್ಚಾಲು ವಲಯದಲ್ಲಿ ಅಮೃತ ಪಥ ಕಾರ್ಯಕ್ರಮ.

ಉತ್ತರಕನ್ನಡದಲ್ಲಿ ನಿಫಾ ವೈರಸ್ ಪತ್ತೆಯಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿ ಜನತೆಗೆ ಆಘಾತ ನೀಡಿತ್ತು, ಇದೀಗ ನಿಫಾ ವೈರಸ್ ಪರೀಕ್ಷಾ ವರದಿ ನೆಗೆಟಿವ್ ಬಂದಿರುವುದು ಜಿಲ್ಲೆಯ ಜನತೆಗೆ ಸಮಾಧಾನ ತಂದಿದೆ.

RELATED ARTICLES  ನಿಮ್ಮ ಜನ್ಮರಾಶಿಗೆ ಅನುಗುಣವಾಗಿ (ದಿನಾಂಕ 22-01-2019) ಇಂದಿನ ದಿನ ಫಲಾನುಫಲಗಳು ಹೇಗಿರಲಿದೆ ಗೊತ್ತೆ?

PG ADS

Vinayak Rexin copy.jpgNEW