ಕಾರವಾರ : ಕುಮಟಾ ತಾಲೂಕಿನ ಕಿಮಾನಿ ಗ್ರಾಮದಲ್ಲಿ ಆಹಾರ ಅರಸಿ ಬಂದಿದ್ದ ಚಿರತೆಯಿಂದು ಬೋನಿನಲ್ಲಿ ಇದ್ದ ನಾಯಿ ಹಿಡಿಯಲು ಹೋಗಿ ಬೋನಿನಲ್ಲೇ ಬಂಧಿಯಾದ ಘಟನೆ ಇಂದು ನಡೆದಿದೆ. ರಾತ್ರಿ ನಾಯಿ ಹಿಡಿಯಲು ಬಂದಿದ್ದ ಚಿರತೆಯನ್ನು ನಾಯಿ ಬೋನಿನೊಳಗೆ ಹೋದದ್ದನ್ನ ಗಮನಿಸಿದ ಮನೆಯ ಮಾಲಿಕರು ತಕ್ಷಣ ಬೋನನ್ನು ಲಾಕ್ ಮಾಡಿದ್ದಾರೆ.
ಅದೃಷ್ಟವಶಾತ್ ಬೋನಿನಲ್ಲಿ ಇದ್ದ ನಾಯಿ ತಪ್ಪಿಸಿಕೊಂಡಿದ್ದು ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು ಇದೀಗ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಚಿರತೆ ರಕ್ಷಣೆ ಮಾಡಲು ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ ಎಂದು ವರದಿಯಾಗಿದೆ.
ಕಾರ್ಯಾಚರಣೆಗೆ ದೊಡ್ಡ ಸವಾಲು ಎದುರಾಗಿದ್ದು ಹೆಚ್ಚು ಗಟ್ಟಿ ಇಲ್ಲದ ಕಾರಣ ಚಿರತೆ ದಾಳಿ ಮಾಡುವ ಸಾಧ್ಯತೆಗಳಿದ್ದು ನುರಿತ ತಂಡ ಇದರ ರಕ್ಷಣೆಗೆ ಪ್ರಯತ್ನಿಸುತಿದ್ದಾರೆ. ಅಶೋಕ ತದಡಿ,ಪವನ ಕುಮಟಾ ಹಾಗೂ ಅರಣ್ಯ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ಕೈಗೊಂಡಿದ್ದಾರೆ.
ವಿಡಿಯೋ ನೋಡಿ.