ಕುಮಟಾದಲ್ಲಿ ನಾಳೆ ಎಲ್ಲೆಲ್ಲಿ ನಡೆಯಲಿದೆ ಲಸಿಕಾಕರಣ?
ಹೊನ್ನಾವರದ ಸಮಗ್ರ ಮಾಹಿತಿ.
ಯಲ್ಲಾಪುರದ ಮಾಹಿತಿ
ಯಲ್ಲಾಪುರ: ಕೊರೊನಾ ಮಹಾಮೇಳ ಸೆ.17 ಶುಕ್ರವಾರ ನಡೆಯಲಿದ್ದು, ಯಲ್ಲಾಪುರದಲ್ಲಿ 6800 ಡೋಸ್ ಲಸಿಕೆ ಲಭ್ಯವಿದ್ದು, ಪ್ರಥಮ ಮತ್ತು ದ್ವಿತೀಯ ಡೋಸ್ ಲಸಿಕೆ ಪಡೆದುಕೊಳ್ಳುವವರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ತಾಲೂಕಿಗೆ ಲಭ್ಯವಿರುವ 6800 ಡೋಸ್ ಲಸಿಕೆಯನ್ನು ತಾಲೂಕಾಸ್ಪತ್ರೆಯಲ್ಲಿ 400 ಡೋಸ್ ಇನ್ನುಳಿದದ್ದನ್ನು ಚವತ್ತಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 400, ಮಂಚಿಕೇರಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 1050, ಕುಂದರಗಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 500, ಕಿರವತ್ತಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 900, ದೇಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 600, ಮಲವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 500, ಕಳಚೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 150, ವಜ್ರಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 600, ನಂದೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 1700 ಡೋಸ್ ವ್ಯಾಕ್ಸಿನ್ ಲಭ್ಯವಿದೆ. ಇನ್ನೂ ಹೆಚ್ಚಿನ ಮಾಹಿತಿಗೆ ಹತ್ತಿರದ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಿ ಎಂದು ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.