ಹೊನ್ನಾವರ : ಬೈಕ್ ಸ್ಕಿಡ್ ಆಗಿ ತಲೆಗೆ ಬಲವಾದ ಪೆಟ್ಟುಬಿದ್ದು ಗ್ರಾಮ ಪಂಚಾಯಿತಿ ನ ಪಿ‌.ಡಿ.ಓ ಒಬ್ಬರು ಕೊನೆಯುಸಿರೆಳೆದಿರುವ ಘಟನೆ ವರದಿಯಾಗಿದೆ. ದುಂಡಕುಳಿ ಸಮೀಪ ಈ ಘಟನೆ ನಡೆದಿದೆ.

ತಾಲ್ಲೂಕಿನ ಇಡಗುಂಜಿ – ಸಾಲ್ಕೊಡ್ ಗ್ರಾಮ ಪಂಚಾಯತ್ ಪಿಡಿಓ ಪ್ರಶಾಂತ ಕೃಷ್ಣ ಶೆಟ್ಟಿ ಅಪಘಾತದಲ್ಲಿ ಕೊನೆಯುಸಿರೆಳೆದ ದುರ್ದೈವಿ. ಜಿಲ್ಲಾ ಕೇಂದ್ರ ಕಾರವಾರದಲ್ಲಿ ನಡೆಯಲಿದ್ದ ಕಂಪ್ಯೂಟರ್ ಪರೀಕ್ಷೆಗೆ ಹಾಜರಾಗಲು ಬೈಕ್ ನಲ್ಲಿ ಹೊನ್ನಾವರ ದಿಂದ ಕಾರವಾರಕ್ಕೆ ಹೋಗುತ್ತಿರುವಾಗ, ಬೈಕ್ ಸ್ಕಿಡ್ ಆಗಿ ಬಿದ್ದು ತಲೆಗೆ ಬಲವಾದ ಹೊಡೆತ ಬಿದ್ದ ಕಾರಣ ಇವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು.

RELATED ARTICLES  ಅನ್ನದಂಗಳದಲ್ಲಿ ರೈತರೊಂದಿಗೆ ಸಂವಾದ’ ಕಾರ್ಯಕ್ರಮ

ಬೈಕ್ ಮೇಲೆ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್ ಸ್ಕಿಡ್ ಆಗಿಯೋ ಅಥವಾ ಇನ್ನಾವುದೋ ಕಾರಣದಿಂದ ಡಿವೈಡರ್ ಗೆ ಗುದ್ದಿದ ಕಾರಣ ಇವರು ರಸ್ತೆಯಲ್ಲಿ ಉರುಳಿದ್ದಾರೆ. ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಇವರು ಆಸ್ಪತ್ರೆ ಯಲ್ಲಿ ನಿಧನ ಹೊಂದಿದ್ದಾರೆ ಎನ್ನಲಾಗಿದೆ.

RELATED ARTICLES  ಪ್ರವಾಸೋದ್ಯಮ ಬೆಳವಣಿಗೆ ನಿಟ್ಟಿನಲ್ಲಿ ಹೂಡಿಕೆ ಮಾಡಲು ಮುಂದೆ ಬಂದರೆ ಸರ್ಕಾರದಿಂದ ಸಂಪೂರ್ಣ ಸಹಕಾರ : ವೈದ್ಯ