ಶಿರಸಿ: ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕಾ ಪಂಚಾಯ್ತಿ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಶುಕ್ರವಾರ ಇಲ್ಲಿನ ತಾಪಂ ಸಭಾಭವನದಲ್ಲಿ ಆಚರಿಸಲಾಯಿತು.

ಸಾಕ್ಷರತಾ ದಿನಾಚಣೆಯ ಹಿನ್ನೆಲೆಯಲ್ಲಿ ತಾ.ಪಂ. ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಸಿಬ್ಬಂದಿಗಳು ಹಾಗೂ ವಿವಿಧ ಇಲಾಖೆಗಳ ಅನಿಷ್ಠಾನಾಧಿಕಾರಿಗಳು ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿ ಸಾಕ್ಷರತೆಯ ಕುರಿತಂತೆ ಜಾಗೃತಿ ಮೂಡಿಸಿ ಅರ್ಥಪೂರ್ಣವಾಗಿ ಆಚರಿಸಿದರು.

ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ತಾ.ಪಂ. ಅಧ್ಯಕ್ಷೆ ಶ್ರೀಲತಾ ಕಾಳೇರಮನೆ ಮಾತನಾಡಿ,  ಸಾಕ್ಷರತೆ ಎಂಬುದು ನಾಶವಾಗದ ಸಂಪತ್ತಾಗಿದೆ. ಅಕ್ಷರಸ್ಥರು ನಿಜವಾದ ಶ್ರೀಮಂತರಾಗಿದ್ದಾರೆ. ಸಾಕ್ಷರರಾಗಿ ಎಲ್ಲರೆದುರು ತಲೆಯೆತ್ತಿ ನಿಲ್ಲೋಣ. ದೇಶದ ಅಭಿವೃದ್ಧಿಗೆ ಕೈಜೋಡಿಸೋಣ ಎಂದು ಕರೆ ನೀಡಿದರು.

RELATED ARTICLES  ಸರಸ್ವತಿ ವಿದ್ಯಾ ಕೇಂದ್ರದಲ್ಲಿ ಶಾರದಾ ಪೂಜೆ : ಮಕ್ಕಳಿಂದ ವಾಗ್ದೇವಿ ಆರಾಧನೆ.

ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಬಸವರಾಜ ದೊಡ್ಮನಿ ಮಾತನಾಡಿ, ದೇಶ ಅಭಿವೃದ್ಧಿಗೆ ಶಿಕ್ಷಣ ಅತಿ ಮಹತ್ವದ್ದಾಗಿದೆ. ಪ್ರತಿಯೊಬ್ಬರು ಶಿಕ್ಷಣವನ್ನು ಪಡೆದುಕೊಳ್ಳಬೇಕು. ಜನರಿಗೆ ಎಂದು ಜಾರಿಗೆ ತಂದಿರುವ ಸರ್ಕಾರಿ ಯೋಜನೆಗಳನ್ನು ತಿಳಿದುಕೊಳ್ಳಲಾದರೂ ಸಹ ನಮಗೆ ಶಿಕ್ಷಣ ಬೇಕು. ಪ್ರತಿಯೊಬ್ಬರು ಶಿಕ್ಷಣ ಪಡೆದು ಅಕ್ಷರಸ್ಥರಾಗಿ ದೇಶ ಮುನ್ನಡೆಸಬೇಕು ಎಂದರು.

RELATED ARTICLES  ಪ್ರವಾಸೋದ್ಯಮ ಇಲಾಖೆಯಿಂದ 2 ಕೋಟಿ ರೂ. ಕಾಮಗಾರಿಗೆ ಮಂಜೂರಿ

ಇದೇ ವೇಳೆ ವಿಚಾರವಾದಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಅವರಿಗೆ ಒಂದು ನಿಮಿಷದ ಮೌನ ಆಚರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ ತಾ.ಪಂ. ಉಪಾಧ್ಯಕ್ಷ ಚಂದ್ರು ದೇವಾಡಿಗ, ಸ್ಥಾಯಿ ಸಮಿತಿ ಅಧ್ಯಕ್ಷ ರವಿ ಹಳದೋಟ, ಸದಸ್ಯರಾದ ನಾಗರಾಜ ಶೆಟ್ಟಿ, ರತ್ನಾ ಶೆಟ್ಟಿ, ಪ್ರೇಮ ಬೇಡರ್ ಉಪಸ್ಥಿತರಿದ್ದರು.