ಗೋಕರ್ಣ : ಶುಕ್ರವಾರ ಬೆಳ್ಳಂಬೆಳಿಗ್ಗೆ ಮನೆಯೊಂದರ ಟೆರೇಸ್ ಮೇಲೆ ವ್ಯಕ್ತಿಯೊಬ್ಬರನ್ನು ರಾಡ್ ನಿಂದ ಹೊಡೆದು ಕೊಲೆಗೈದ ಘಟನೆ ವರದಿಯಾಗಿದ್ದು, ಇಡೀ ಜಿಲ್ಲೆಯ ಜನತೆ ಬೆಚ್ಚಿ ಬೀಳುವಂತೆ ಮಾಡಿದೆ. ಈ ಘಟನೆ ನಡೆದಿರುವುದು ತಾಲೂಕಿನ ತದಡಿ ಬಂದರು ಸಮೀಪ.
ಕೊಲೆಯಾದ ವ್ಯಕ್ತಿಯನ್ನು ತದಡಿಯ ವಿವೇಕಾನಂದ ಪುತ್ತು ಶ್ಯಾನಭಾಗ ಎಂದು ಗುರುತಿಸಲಾಗಿದೆ,ಕೊಲೆ ಮಾಡಿದ ಆರೋಪಿ ತದಡಿ ಬಂದರಿನಲ್ಲಿ ಮೀನುಗಾರಿಕೆಗೆ ಬಂದಿದ್ದ ಎನ್ನಲಾಗಿದೆ.
ಕೊಲೆ ಮಾಡಿರುವ ಆರೋಪಿತ ವ್ಯಕ್ತಿ ಓರಿಸ್ಸಾ ಮೂಲದವನು ಎನ್ನಲಾಗಿದೆ. ಆರೋಪಿ ಕಬ್ಬಿಣದ ರಾಡ್ ನಿಂದ ಹೊಡೆದು ಓಡಿ ಹೋಗಿ ಸಮುದ್ರದಲ್ಲಿ ಹಾರಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಸ್ಥಳಿಯರು ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ ಎನ್ನಲಾಗಿದೆ.
ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲವಾದರೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸ್ ತನಿಖೆಯ ನಂತರ ಪೂರ್ಣ ಮಾಹಿತಿ ತಿಳಿದುಬರಬೇಕಿದೆ.