ಅಂಕೋಲಾ: ವೈದ್ಯಕೀಯ ಆಕ್ಸಿಜನ್ ಸಿಲಿಂಡರ್ ಗಳನ್ನು ತುಂಬಲಾಗಿದ್ದ ಮಿನಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿ ವಾಹನ ಚಾಲಕ ಮತ್ತು ಸಹಾಯಕರು ಗಾಯಗೊಂಡ ಘಟನೆ ವರದಿಯಾಗಿದೆ. ಅಂಕೋಲಾ ಸಮೀಪ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ , ವೈದ್ಯಕೀಯ ಆಕ್ಸಿಜನ್ ಸಿಲಿಂಡರ್ ಗಳನ್ನು ಬೆಟ್ಕುಳಿಯಿಂದ ಹೊತ್ತು ಆಮ್ಲಜನಕ ಉತ್ಪಾದನಾ ಘಟಕದಿಂದ ಜಿಲ್ಲಾ ಆಸ್ಪತ್ರೆಗೆ ಸಾಗುತ್ತಿದ್ದ ವೇಳೆ ಈ ಅವಘಡ ನಡೆದಿದೆ.

ಆಮ್ಲಜನಕ ಉತ್ಪಾದನಾ ಘಟಕದಿಂದ ಜಿಲ್ಲಾ ಆಸ್ಪತ್ರೆಗೆ ಆಕ್ಸಿಜನ್ ಸಿಲಿಂಡರ್ ಗಳನ್ನು ಸಾಗುತ್ತಿದ್ದ ಸಂದರ್ಭದಲ್ಲಿ ಪಲ್ಟಿಯಾಗಿದೆ. ವಾಹನ ಪಲ್ಟಿಯಾದ ಕಾರಣ ಆಕ್ಸಿಜನ್ ಸಿಲೆಂಡರ್ ಸೋರಿಕೆಯಾಗುತ್ತಿರುವುದು ಕಂಡು ಬಂತು. ವೈದ್ಯಕೀಯ ಸೇವೆಗೆ ಬಳಸುವ ಆಮ್ಲಜನಕ ಎಂದು ತಿಳಿದೊಡನೆ ಯಾವುದೇ ಅಪಾಯವಿಲ್ಲ ಎಂದು ಅಕ್ಕಪಕ್ಕದ ನಿವಾಸಿಗಳು ಮತ್ತು ದಾರಿಹೋಕರು ಸಮಾಧಾನದ ನಿಟ್ಟುಸಿರು ಬಿಟ್ಟರು.

RELATED ARTICLES  ಭಟ್ಕಳದಲ್ಲಿ ಮಳೆಯಿಂದಾಗಿ ಅವಾಂತರ

ಕ್ರೇನ್ ಬಳಸಿ, ಜಂಬೋ ಸಿಲೆಂಡರ್ ಮತ್ತಿತರ ಸಿಲಿಂಡರ್ಗಳನ್ನು ಎತ್ತಿ ಬದಲಿ ವಾಹನದ ಮೂಲಕ ಪುನಃ ಬೆಟ್ಕುಳಿಯ ಉತ್ಪಾದನಾ ಘಟಕಕ್ಕೆ ಸಾಗಿಸಿರುವುದಾಗಿ ತಿಳಿದು ಬಂದಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ವಾಹನದಲ್ಲಿ ಸಿಲುಕಿಕೊಂಡಿದ್ದ ಸಿಬ್ಬಂದಿಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

RELATED ARTICLES  ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಅಗ್ನಿ ಶಾಮಕ ದಳದ ಠಾಣಾಧಿಕಾರಿ ಉಮೇಶ ನಾಯ್ಕ, ಸಿಬ್ಬಂದಿಗಳಾದ ಜೀವನ ಬಬ್ರುಕರ್, ಗಣೇಶ ನಾಯ್ಕ ,ರವಿರಾಜ್ ಜೊತೆ ಮಂಜುನಾಥ ನಾಯಕ ಮೊದಲಾದವರು ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಪಿಎಸ್ಐ ಪಿಎಸ್ಐ ಪ್ರೇಮನ ಗೌಡ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ಪೊಲೀಸ್ ಸಿಬ್ಬಂದಿಗಳು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಸ್ಥಳೀಯರು ಸಹಕರಿಸಿದರು.