ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಉದಯೋನ್ಮುಖ ನಟಿ ಸೌಜನ್ಯ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ವರದಿಯಾಗಿದೆ. ಡೆತ್‌ನೋಟನ್ನು ಮೂರು ದಿನಗಳ ಹಿಂದೆಯೇ ಬರೆದಿದ್ದ ಸೌಜನ್ಯ, ಇಂದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯಾ ಪತ್ರದಲ್ಲಿ, ತಂದೆ ತಾಯಿ ಬಳಿ ಕ್ಷಮೆ ಕೇಳಿರುವ ಸೌಜನ್ಯಾ,  ಸಾಯಲು ಇಷ್ಟವಿಲ್ಲದಿದ್ದರೂ ಆತ್ಮಹತ್ಯೆ ನಿರ್ಧಾರ ತೆಗೆದುಕೊಂಡಿರುವುದಾಗಿ ಬರೆದಿದ್ದಾರೆ ಎನ್ನಲಾಗಿದೆ.

ಕುಂಬಳಗೋಡಿನ ದೊಡ್ಡಬೆಲೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಗುರುವಾರ ಬೆಳಗ್ಗೆ ಡೆತ್ ನೋಟ್ ಬರೆದಿಟ್ಟು ನಟಿ  ಸೌಜನ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಆತ್ಮಹತ್ಯೆ ಮಾಡಿಕೊಂಡ ಸೌಜನ್ಯ ಕೊಡಗಿನ ಕುಶಾಲನಗರದ ಮೂಲದವರಾಗಿದ್ದು ಹಲವು ಧಾರಾವಾಹಿಗಳು ಮತ್ತು ಚೌಕಟ್ಟು ಹಾಗೂ ಫನ್ ಸಿನೆಮಾಗಳಲ್ಲಿ ನಟಿಸಿದ್ದರು. 

RELATED ARTICLES  ವಿವಾದದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ ರೋಷನ್ ಬೇಗ್!

ಕುಂಬಳಗೋಡಿನ ದೊಡ್ಡಬೆಲೆಯ ಅಪಾರ್ಟ್ ಮೆಂಟ್ ನಲ್ಲಿ ಕಳೆದ ಕೆಲ ಸಮಯಗಳಿಂದ ವಾಸಿಸುತ್ತಿದ್ದರು ಎಂದು ಕೆಲ‌ ಪತ್ರಿಕಾ ವರದಿಯ ಮೂಲಕ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗ್ಗೆ ಸ್ನೇಹಿತನಿಗೆ ತಿಂಡಿ ತೆಗೆದುಕೊಂಡು ಬಾ ಎಂದು ಹೇಳಿ ಕಳುಹಿಸಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಡೆತ್ ನೋಟ್ ನಲ್ಲಿ ತಾನು ಆರೋಗ್ಯ ಸಮಸ್ಯೆ ಮತ್ತು ಕೆಲವು ತೊಂದರೆಗಳಿಂದ ಬಳಲುತ್ತಿದ್ದು, ಯಾರಲ್ಲಿಯೂ ಹೇಳಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಅನಾರೋಗ್ಯಕ್ಕೆ ಔಷಧಿ ತೆಗೆದುಕೊಂಡರೂ ಕಡಿಮೆಯಾಗುತ್ತಿಲ್ಲ, ಆತ್ಮಹತ್ಯೆ ಮಾಡಿಕೊಳ್ಳಲು ತಮಗೆ ಇಷ್ಟವಿಲ್ಲದಿದ್ದರೂ ಬೇರೆ ದಾರಿ ತೋಚುತ್ತಿಲ್ಲ, ದಯವಿಟ್ಟು ಕ್ಷಮಿಸಿ ಎಂದು ತನ್ನ ಕುಟುಂಬಸ್ಥರು ಹಾಗೂ ಸ್ನೇಹಿತರನ್ನುದ್ದೇಶಿಸಿ ಡೆತ್ ನೋಟ್ ಬರೆದಿರುವುದಾಗಿ ಮೂಲಗಳು ತಿಳಿಸಿವೆ.  ಕೋವಿಡ್ 19 ನಂತರ ಚಿತ್ರರಂಗದ ಚಟುವಟಿಕೆ ಸ್ಥಗಿತಗೊಂಡಿದ್ದು, ಅವಕಾಶ ಸಿಗದ ಕಾರಣ ಖಿನ್ನತೆಗೆ ಒಳಗಾಗಿ ಸೌಜನ್ಯ ಆತ್ಮಹತ್ಯೆಗೆ ಶರಣಾರಾಗಿರಬಹುದು ಎಂಬ ಶಂಕೆಯೂ ವ್ಯಕ್ತವಾಗಿದೆ.

RELATED ARTICLES  ನಿಮ್ಮ ಜನ್ಮರಾಶಿಗೆ ಅನುಗುಣವಾಗಿ (ದಿನಾಂಕ 23-03-2019) ಇಂದಿನ ದಿನ ಫಲಾನುಫಲಗಳು ಹೇಗಿರಲಿದೆ ಗೊತ್ತೆ?