ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ವಿ. ರಾಧಾ ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಬಿ.ವಿ.ರಾಧ ಅವರಿಗೆ 69 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಕಲ್ಯಾಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ. ಇಂದು ಬೆಳಗಿನ ಜಾವ 3.30 ಸುಮಾರಿಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

RELATED ARTICLES  ನ್ಯಾಯಾಂಗದ ಮೇಲೆ ಪ್ರತಿವಾದಿಗಳಿಂದಲೇ ಒತ್ತಡ: ಶ್ರೀರಾಮಚಂದ್ರಾಪುರ ಮಠ ಸ್ಪಷ್ಟನೆ

ಬಿ.ವಿ ರಾಧಾ ಅವರು ಹಿರಿಯ ನಟ ಹಾಗೂ ನಿರ್ದೇಶಕ ಕೆ.ಎಸ್.ಎಲ್ ಸ್ವಾಮಿ ಅವರ ಪತ್ನಿ. ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ತೆಲುಗು, ಮಲಾಯಾಳಂ, ತಮಿಳು ಹಾಗೂ ಹಿಂದಿ ಭಾಷೆಯಲ್ಲಿ ನಟಿಸಿದ್ದಾರೆ.

RELATED ARTICLES  ಕುಮಟಾ ಹಾಗೂ ಹೊನ್ನಾವರದಲ್ಲಿ ನಾಳೆ ಎಲ್ಲೆಲ್ಲಿ ಕೊರೋನಾ ಲಸಿಕಾಕರಣ...?