ಶಿರಸಿ : ಜಿಲ್ಲೆಯ ಅಭಿವೃದ್ಧಿಯ ಕುರಿತಾಗಿ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದು, ಉತ್ತರ ಕನ್ನಡ ಜಿಲ್ಲೆ ಪ್ರಸ್ತುತ ಹಲವು ಅವಕಾಶಗಳಿಗೆ ತೆರೆದುಕೊಳ್ಳುತ್ತಿದೆ. ಬೃಹತ್ ಯೋಜನೆಗಳು ಜಿಲ್ಲೆಗೆ ಬರುತ್ತಿದ್ದು ಅವುಗಳನ್ನು ಸ್ವಾಗತಿಸಬೇಕಿದೆ ಎಂದಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮುಂದಿನ ಐದು- ಹತ್ತು ವರ್ಷಗಳಲ್ಲಿ ಉತ್ತರ ಕನ್ನಡ ಹೇಗಾಗಲಿದೆ? ಮತ್ತು ಅದಕ್ಕಾಗಿ ಜಿಲ್ಲೆಯ ಜನರು ಹೇಗೆ ತಯಾರಿರಬೇಕೆಂಬುದನ್ನು ತೆರೆದಿಟ್ಟಿದ್ದಾರೆ. ಫೇಸ್ ಬುಕ್‌ನಲ್ಲಿ ಈ ಕುರಿತ ವಿಡಿಯೋವನ್ನು ಅವರು ಹಾಕಿದ್ದಾರೆ.
ಸಾಗರಮಾಲಾ ಯೋಜನೆಗೆ ಕಾರವಾರದಲ್ಲಿ ಬೃಹತ್ ಪ್ರಮಾಣದ ಬಂದರು ಮಾಡಬೇಕೆಂದು ಕೇಂದ್ರ ಸರ್ಕಾರ ತೀರ್ಮಾನ ಮಾಡಿದಾಗ ಹಾಗೂ ಹೊನ್ನಾವರದಲ್ಲಿ ಬಂದರು ಕೆಲಸ ಪ್ರಾರಂಭವಾಗುತ್ತಿದ್ದಂತೆ ವಿರೋಧ ವ್ಯಕ್ತವಾಗುತ್ತಿದೆ. ಇನ್ನೇನು ಬೇಲೇಕೇರಿ ಕೆಲಸ ಶುರುವಾಗಲಿಕ್ಕಿದೆ, ಗೊತ್ತಿಲ್ಲ ಮುಂದೆ ಏನಾಗುತ್ತದೆಂದು ಎಂದು ಬೇಸರ ವ್ಯಕ್ತಪಡಿಸಿದರು. ಬಹುಸಂಖ್ಯಾತ ಉತ್ತರ ಕನ್ನಡದ ಜನರಿಗೆ ಈ ಜಿಲ್ಲೆಯಲ್ಲಿ ಹೊಸ ಅಭಿವೃದ್ಧಿ ಕಾಣಬೇಕೆಂಬ, ಆರ್ಥಿಕ ಚಟುವಟಿಕೆ ಬೆಳೆಯಬೇಕೆಂಬ ಹಂಬಲವಿದೆ. ಆದರೆ ಎಲ್ಲಿಂದಲೂ ಆ ಧ್ವನಿ ಕೇಳುತ್ತಿಲ್ಲ ಎಂದಿದ್ದಾರೆ ಅವರು.
ವಿಡಿಯೋ ಇಲ್ಲಿದೆ.