ಅಂಕೋಲಾ : ಜಲಪಾತದ ವೀಕ್ಷಣೆಗೆಂದು ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗನ ನಿಯಂತ್ರಣ ತಪ್ಪಿ ಬಿದ್ದು ಸವಾರ ಅಪಘಾತಕ್ಕೀಡಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಗೋವಾದಿಂದ ಅಂಕೋಲಾ ತಾಲೂಕಿನ ಅಚವೆ – ವಿಭೂತಿ ಜಲಪಾತಕ್ಕೆ ವಿಕ್ಷಣೆಗೆ ಬಂದ ಪ್ರವಾಸಿಗನ ಬೈಕ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ನಡೆದಿದ್ದು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಲಪಾತದ ವೀಕ್ಷಣೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದ್ದರಿಂದ ಸವಾರನ ಕಾಲಿಗೆ ಗಾಯವಾಗಿದೆ ಎನ್ನಲಾಗಿದೆ. ಈ ಬಗ್ಗೆ ಸ್ಥಳೀಯರು ಪೊಲೀಸ್ ಸಹಾಯವಾಣಿ 112 ಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಗಾಯಗೊಂಡ ಪ್ರವಾಸಿಗನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಬಳಿಕ ಪ್ರವಾಸಿಗಳನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಅಪಘಾತದಿಂದ ಬೈಕ್ ಹಾನಿಯಾಗಿದ್ದು ಈ
ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.