ಕಾಲುಜಾರಿ ತೋಟದ ಬಾವಿಗೆ ಬಿದ್ದು ವ್ಯಕ್ತಿ ಸಾವು.
ಕುಮಟಾ : ಆಕಸ್ಮಿಕವಾಗಿ ತೋಟದ ಬಾವಿಗೆ ಬಿದ್ದು ವೃದ್ದನೋರ್ವ ಮೃತಪಟ್ಟ ಘಟನೆ ಗೋಕರ್ಣದಲ್ಲಿ ಸಂಭವಿಸಿದೆ. ಗೋಕರ್ಣ ಪೊಲೀಸ್ ಠಾಣೆಯಲ್ಲಿ ಮಂಗಳವಾರ ರಾತ್ರಿ ಪ್ರಕರಣ ದಾಖಲಾಗಿದೆ. ಮೂಲತಃ ಕುಮಟಾ ತಾಲೂಕಿನ ಹಾರು ಮಾಸ್ಟೇರಿ ನಿವಾಸಿ ಪೀಟರ್ ಫರ್ನಾಂಡಿಸ್ ಮೃತ ವ್ಯಕ್ತಿ.
ಈತ ತೋಟದಲ್ಲಿ ಕೃಷಿ ಕೆಲಸ ನಿರ್ವಹಿಸುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ಗೋಕರ್ಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಪಿ.ಎಸ್.ಐ. ನವೀನ ನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರಕ್ಕೆ ಸಾಗಿಸಿ, ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ. ಈ ಕುರಿತು ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರಕನ್ನಡದ ಇಂದಿನ ಕೊರೋನಾ ಅಪ್ಡೇಟ್
ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 17 ಕೊರೊನಾ ಕೇಸ್ ಪತ್ತೆಯಾಗಿದೆ. ಅದರಂತೆ 29 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 55,706 ಕೊರೊನಾ ಕೇಸ್ ಪತ್ತೆಯಾಗಿದೆ. ಇದರಲ್ಲಿ 54,743 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಒಟ್ಟೂ 778 ಜನರು ಮೃತಪಟ್ಟಿದ್ದು ಈವರೆಗೆ 185 ಪ್ರಕರಣ ಸಕ್ರಿಯವಾಗಿದೆ. ಇದರಲ್ಲಿ 119 ಜನರು ಹೋಮ್ ಐಸೊಲೇಶನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು 66 ಜನರು ಕೋವಿಡ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಬುಧವಾರ ಶೇ.0.89 ರಷ್ಟು ಕೊರೊನಾ ಪಾಸಿಟಿವಿಟಿ ಪ್ರಮಾಣ ದಾಖಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಅದರಂತೆ ಕಳೆದ ಎರಡು ದಿನದ ಅವಧಿಯ ಮಗಳವಾರದಂದು ಶೇ.0.92 ಹಾಗೂ ಸೋಮವಾರ ಶೇ. 0.85 ರಷ್ಟು ಪಾಸಿಟಿವಿಟಿ ದಾಖಲಾಗಿತ್ತು.