ಕುಮಟಾ : ತಾಲೂಕಿಗೆ ಪ್ರಪ್ರಥಮ ಬಾರಿ ಆಗಮಿಸಿದ ನಮ್ಮ ಸರ್ಕಾರದ ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಮತ್ತು ಸಕಾಲ ಸಚಿವರಾದ ಸನ್ಮಾನ್ಯ ಶ್ರೀ ಬಿ. ಸಿ. ನಾಗೇಶ್ ಅವರಿಗೆ ಬಿಜೆಪಿ ಕಾರ್ಯಾಲಯದಲ್ಲಿ ಕುಮಟಾ ಮಂಡಲದ ವತಿಯಿಂದ ಆತ್ಮೀಯವಾದ ಸ್ವಾಗತ ಕೋರಲಾಯಿತು. ನಂತರ ತಾಲೂಕಿನ ವಿವಿಧ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದರು.

ಹನುಮಂತ ಬೆಣ್ಣೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಚಾಲನೆ.

ಪದವಿ ಪೂರ್ವ ಶಿಕ್ಷಣ ಇಲಾಖೆ , ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆ ಇವರ ಆಶ್ರಯದಲ್ಲಿ ನಬಾರ್ಡ್ ಆರ್ ಐ ಡಿ ಯಫ್ ೨೧ ರ ಅಡಿಯಲ್ಲಿ ಕುಮಟಾದ ನೆಲ್ಲಿಕೇರಿಯ ಹನುಮಂತ ಬೆಣ್ಣೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಯನ್ನ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮತ್ತು ಸಕಾಲ ಸಚಿವರಾದ ಸನ್ಮಾನ್ಯ ಶ್ರೀ ಬಿ ಸಿ ನಾಗೇಶ್ ರವರು ಇಂದು ಉದ್ಘಾಟಿಸಿದರು. ಈವೇಳೆ ಶಾಸಕರಾದ ದಿನಕರ ಶೆಟ್ಟಿ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಪ್ರಾಂಶುಪಾಲರು,ಉಪನ್ಯಾಸಕರು,ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES  ಅರ್ಥಪೂರ್ಣವಾಗಿ ಆಚರಿಸಿದ ಸಮಾಜಕಾರ್ಯ ತರಬೇತಿ ಶಿಬಿರ

ಹಿರೇಗುತ್ತಿಯಲ್ಲಿ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಯಕ್ರಮ.

ನಬಾರ್ಡ್ ಆರ್ ಐ ಡಿ ಯಫ್ ೨೪ ರ ಅಡಿಯಲ್ಲಿ ಜಿಲ್ಲೆಯ ಕುಮಟಾ ತಾಲೂಕಿನ ಹಿರೇಗುತ್ತಿಯಲ್ಲಿ ಪದವಿ ಪೂರ್ವ ಕಾಲೇಜಿನ ಕಟ್ಟಡ ನಿರ್ಮಾಣ ಹೆಚ್ಚುವರಿ ಕೊಠಡಿಗಳ ಕಾಮಗಾರಿಯ ಉದ್ಘಾಟನೆಯನ್ನ ನಮ್ಮ ಸರ್ಕಾರದ ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಮತ್ತು ಸಕಾಲ ಸಚಿವರಾದ ಸನ್ಮಾನ್ಯ ಶ್ರೀ ಬಿ. ಸಿ. ನಾಗೇಶ್ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕ ದಿನಕರ ಶೆಟ್ಟಿ, ಸಹಾಯಕ ಆಯುಕ್ತರಾದ ರಾಹುಲ್ ಪಾಂಡೆ, ಈಶ್ವರ್ ನಾಯ್ಕ ಉಪಸ್ಥಿತರಿದ್ದರು.

ಹೊಲನಗದ್ದೆ ಶಾಲೆಗೆ ಭೇಟಿ.

ತಾಲೂಕಿನ ಹೊಲನಗದ್ದೆ ಶಾಲೆಗೆ ಭೇಟಿ ನೀಡಿ ಸುಸಜ್ಜಿತ ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿದರು. ಸಂಸ್ಥೆ ಶಿಕ್ಷಕರ ಜೊತೆಗೆ ಹಾಗೂ ವಿದ್ಯಾರ್ಥಿಗಳ ಜೊತೆಗೆ ಸಂವಾದ ನಡೆಸಿದ ಶಿಕ್ಷಣ ಸಚಿವರು ಶಾಲೆಯ ಶೈಕ್ಷಣಿಕ ಪರಿಕರಗಳು ವ್ಯವಸ್ಥೆ ಹಾಗೂ ಇನ್ನಿತರ ವ್ಯವಸ್ಥೆಗಳನ್ನು ಮೆಚ್ಚಿ, ಮೆಚ್ಚುಗೆ ವ್ಯಕ್ತಪಡಿಸಿದರು.

RELATED ARTICLES  ನೀರಿನ ಕೊರತೆ ತೀರಿಸಲು ನದಿ ಜೋಡಣೆಯೇ ಶಾಶ್ವತ ಪರಿಹಾರವಲ್ಲ; ಸ್ವರ್ಣವಲ್ಲಿ ಶ್ರೀ

ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದಿಂದ ಮನವಿ.

ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಬಲ ಪುನರ್ ನವೀಕರಣ ಹಾಗೂ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಸೂಕ್ತ ತಿದ್ದುಪಡಿ ತಂದು ಪ್ರಾಥಮಿಕ ಶಾಲೆಯಲ್ಲಿ ಸೇವೆಸಲ್ಲಿಸುತ್ತಿರುವ ಸೇವಾ ಜೇಷ್ಠತೆ ಹಾಗೂ ಬಿ.ಎ, ಬಿಎಸ್‌ಸಿ, ಎಂ.ಎ, ಬಿ.ಇಡಿ ಪದವಿ ಹೊಂದಿರುವ ಶಿಕ್ಷಕರಿಗೆ ಆದ ಅನ್ಯಾಯವನ್ನು ಸರಿಪಡಿಸುವಂತೆ ಕುಮಟಾದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ ಅವರಿಗೆ ಶಾಸಕ ದಿನಕರ ಶೆಟ್ಟಿಯವರ ಸಮ್ಮುಖದಲ್ಲಿ ಕುಮಟಾ ತಾಲೂಕು ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಅಧ್ಯಕ್ಷ ಶಿಕ್ಷಕ ಡಾ.ಶ್ರೀಧರ ಗೌಡ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಸಚಿವರು ಈಗಾಗಲೇ ಈ ಸಮಸ್ಯೆಯು ನನ್ನ ಗಮನಕ್ಕೆ ಬಂದಿದ್ದು ಮೂಲ ಶಿಕ್ಷಕರಿಗೆ ತೊಂದರೆಯಾಗಿರುವುದು ಕಂಡುಬಂದಿದೆ. ಅತಿ ಶೀಘ್ರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದರು. ಈ ಸಂಘದ ಕಾರ್ಯದರ್ಶಿ ಶಿಕ್ಷಕ ಮಂಜುನಾಥ. ಎಂ. ನಾಯ್ಕ ಜೊತೆಗಿದ್ದರು.