ಕಾರವಾರ : ಉತ್ತರಕನ್ನಡದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಉತ್ತರಕನ್ನಡ ಜಿಲ್ಲಾಡಳಿತದ ಕೊರೋನಾ ಹೆಲ್ತ ಬುಲೆಟಿನ್ ನ ಪ್ರಕಾರ ಇಂದು 19 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವುದಾಗಿ ವರದಿಯಾಗಿದೆ.

ಇಂದಿನ ಹೆಲ್ತ ಬುಲೆಟಿನ್ ಪ್ರಕಾರ ಇಬ್ಬರು ಕೊರೋನಾಕ್ಕೆ ಬಲಿಯಾಗಿದ್ದು ಕಾರವಾರದಲ್ಲಿ ಒಂದು, ಶಿರಸಿಯಲ್ಲಿ 1 ಸಾವಾಗಿದ್ದು, ಉತ್ತರ ಕನ್ನಡದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 779 ಆಗಿದೆ.

ಹೆಲ್ತ ಬುಲೆಟಿನ್ ಪ್ರಕಾರ ಕಾರವಾರದಲ್ಲಿ 3, ಅಂಕೋಲಾದಲ್ಲಿ 0, ಕುಮಟಾದಲ್ಲಿ 1, ಹೊನ್ನಾವರ 1, ಭಟ್ಕಳದಲ್ಲಿ 0, ಶಿರಸಿಯಲ್ಲಿ 0, ಸಿದ್ದಾಪುರದಲ್ಲಿ 0, ಯಲ್ಲಾಪುರದಲ್ಲಿ 1, ಮುಂಡಗೋಡ 12, ಹಳಿಯಾಳದಲ್ಲಿ 0, ಮತ್ತು ಜೋಯಿಡಾದಲ್ಲಿ 0 ಒಟ್ಟೂ 19 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

RELATED ARTICLES  ಬಸ್ ಅಪಘಾತ : ಸ್ವಲ್ಪದರಲ್ಲಿ ತಪ್ಪಿದ ಭಾರೀ ಅನಾಹುತ.

ಜಿಲ್ಲೆಯಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 177 ಆಗಿದ್ದು, ಅವರಲ್ಲಿ 67 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 110 ಸೋಂಕಿತರು ಹೋಮ್ ಐಸೋಲೇಷನ್‌ನಲ್ಲಿದ್ದಾರೆ.

ಕಾರವಾರ 8, ಅಂಕೋಲಾ‌ 1, ಕುಮಟಾ 0, ಹೊನ್ನಾವರ 1, ಭಟ್ಕಳ 0, ಶಿರಸಿ 2, ಸಿದ್ದಾಪುರ 0, ಯಲ್ಲಾಪುರ 6, ಮುಂಡಗೋಡ 0, ಹಳಿಯಾಳ 0, ಜೋಯ್ಡಾ 0 ಕೊರೋನಾ ಗೆದ್ದಿದ್ದಾರೆ. ಅಂದರೆ ಒಟ್ಟೂ 18 ಜನ ಇಂದು ಕೊರೋನಾ ಗೆದ್ದು ಬಂದವರಾಗಿದ್ದಾರೆ.

RELATED ARTICLES  'ಇಸ್ಲಾಂ, ಜಗತ್ತಿಗೆ ಒಂದು ಬಾಂಬ್' ಪ್ರಕರಣ; ಸಂಸದ ಅನಂತಕುಮಾರ್ ಅವರಿಗೆ ಬಿಗ್ ರಿಲೀಫ್

ಸಾಮಾಜಿಕ ಅಂತರ ಕಾಪಾಡುವ ಜೊತೆಗೆ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಬೇಕಾಬೆಟ್ಟಿ ತಿರುಗಾಡದೇ ನಿಮ್ಮ ಆರೋಗ್ಯದ ಬಗ್ಗೆ ನೀವೆ ಎಚ್ಚರವಹಿಸಿ ಇದುವೇ ಜನತೆಗೆ ನಮ್ಮ ಕಳಕಳಿಯ ಮನವಿ.