ಯಲ್ಲಾಪುರ: ಉತ್ತರಕನ್ನಡದ ಅಲ್ಲಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಹಾಗೂ ಗಾಂಜಾ ಸಾಗಾಟದ ಕುರಿತಂತೆ ಪ್ರಕರಣಗಳು ಮತ್ತೆ ಮತ್ತೆ ವರದಿಯಾಗುತ್ತಿದೆ ಪೊಲೀಸರು ಆರೋಪಿಗಳನ್ನು ಹೆಡೆಮುರಿ ಕಟ್ಟುವ ಕೆಲಸದಲ್ಲಿ ನಿರತರಾಗಿದ್ದಾರೆ. ಆದರೂ ಸಹ ಮತ್ತೆ ಮತ್ತೆ ಗಾಂಜಾ ಮಾರಾಟ ಪ್ರಕರಣಗಳು ವರದಿಯಾಗುತ್ತಿದೆ. ಓಡಾಟ ಮಾಡುವವರಿಗೆ ಹಾಗೂ ಸುತ್ತಲಿನ ಜನರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಪ್ರಕರಣ ವರದಿಯಾಗಿದೆ.

RELATED ARTICLES  ರಂಗ ಸಂಸ್ಕೃತಿ ಬಗ್ಗೆ ಕಾರ್ಯಾಗಾರ: ಕುಮಟಾದಲ್ಲಿ ನಡೆಯಿತು ವಿನೂತನ ಪ್ರಯೋಗ

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಇಲ್ಲಿನ ಸಾತನಕೊಪ್ಪ ಕ್ರಾಸ್ ಬಳಿ ಪೊಲೀಸರು ಬಂಧಿಸಿದ್ದಾರೆ. ಯಲ್ಲಾಪುರ ತಾಲ್ಲೂಕಿನ ಮದ್ದೂರು ಸಮೀಪದ ಮಾದೇವಕೊಪ್ಪದ ತೊಂಡು ವಿಟ್ಟು ವಿಜುಕ್ಲೆ ಬಂಧಿತ ವ್ಯಕ್ತಿ ಎಂದು ತಿಳಿದುಬಂದಿದೆ. ಬಂಧಿತ ಆರೋಪಿ ಸಾತನಕೊಪ್ಪ ಕ್ರಾಸ್ ಬಳಿ ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ. ಈ ವೇಳೆ ಪೊಲೀಸರು ದಾಳಿ ನಡೆಸಿ ಗಾಂಜಾ ಸಮೇತ ಆತನನ್ನು ಬಂಧಿಸಿದ್ದಾರೆ. ಬಂಧಿತನಿoದ 35.4ಗ್ರಾಂ ಗಾಂಜಾ ಮತ್ತು 300 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ಉತ್ತರ ಕನ್ನಡದಲ್ಲಿ ಇಂದು ಒಂದು ಕೊರೋನಾ ಪಾಸಿಟೀವ್ ಪ್ರಕರಣ: ಕ್ವಾರಂಟೈನ್ ನಲ್ಲಿ ಇದ್ದವರಿಗೆ ಸೋಂಕು ದೃಢ