ಯಲ್ಲಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಆರತಿಬೈಲ್ ಘಟ್ಟದ ಕಣ್ಣಿಮನೆ ಕ್ರಾಸ್ ಬಳಿ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಭತ್ತದ ಹೊಟ್ಟು (ಉಮಿ) ತುಂಬಿಕೊಂಡು ಲಾರಿ ಹೊರಟ್ಟಿದ್ದು, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿಯಲ್ಲಿದ್ದ ಸರಕು ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಚಾಲಕ, ನಿರ್ವಾಹಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

RELATED ARTICLES  ನಾಳೆಯೂ ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಣೆ.