ಕಾರವಾರ : ಬೈಕ್ ಗಳನ್ನು ನಿಲ್ಲಿಸುವ ಶೆಡ್ ನಲ್ಲಿ ನಿಲ್ಲಿಸುತ್ತಿದ್ದ ಬೈಕಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ತಾಲೂಕಿನ ಚಿತ್ತಾಕುಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ 4ರ ವೇಳೆ ಗೋಪಶಿಟ್ಟಾದ ಶೇಡ್ ಒಂದರಲ್ಲಿ ನಿಲ್ಲಿಸಿದ್ದ ಎರಡು ಬೈಕ್ ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ನಡೆದಿದೆ.
ಬೆಂಕಿ ಹೊತ್ತಿಕೊಂಡ ಪರಿಣಾಮ ಶೇಡ್ ನಲ್ಲಿದ್ದ
ಎರಡೂ ಬೈಕ್ ಗಳು ಸುಟ್ಟು ಕರಕಲಾಗಿದೆ. ಘಟನೆಯ ಬಗ್ಗೆ ವಿವರ ತಿಳಿಯುತ್ತಿದ್ದಂತೆ ಬೈಕ್ನ ವಾರಸುದಾರರು ಹಾಗೂ ಸ್ಥಳೀಯರು ಪೊಲೀಸ್ ಸಹಾಯವಾಣಿ 112 ಗೆ ಕರೆ ಮಾಡಿದ್ದಾರೆ. ಬೆಳಗ್ಗೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ತಾಕುಲಾ ಪೊಲೀಸರು ಪರಿಶೀಲನೆ
ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ. ಪೊಲೀಸ್ ತನಿಖೆಯ ನಂತರದಲ್ಲಿ ಘಟನೆ ಹಿಂದಿನ ಕಾರಣ ಹಾಗೂ ಯಾರು ಈ ಕೃತ್ಯ ಎಸಗಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಹೊರಬರಬೇಕಿದೆ.