ಭಟ್ಕಳ: ಬಸ್ತಿಯ ರೈಲ್ವೆ ಬ್ರಿಡ್ಜ್ ಸಮೀಪ ಯುವಕನೊರ್ವ ರೈಲ್ವೆ ಹಳಿಗೆ ತಲೆ ಕೊಟ್ಟು ಸಾವನ್ನಪ್ಪಿರುವ ಘಟನೆ ನಡೆದಿದೆ.ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಯುವಕ ಈ ನಿರ್ಣಯ ಕೈಗೊಂಡಿರುವುದಾಗಿ ಸ್ಥಳೀಯವಾಗಿ ವಿವರ ಲಭ್ಯವಾಗಿದೆ. ಮೃತ ಯುವಕ ಗಣೇಶ ಸುಬ್ರಾಯ್ ನಾಯ್ಕ ಬಸ್ತಿ ಎಣ್ಣೆಬೋಳೆ ದೇವಿಕಾನ ನಿವಾಸಿ ಎಂದು ತಿಳಿದು ಬಂದಿದೆ.
ಈತ ಕೆಲವು ವರ್ಷದಿಂದ ಮುರುಡೇಶ್ವರ ಮುತ್ತೂಟ್ ಫೈನಾನ್ಸ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ಯಾವುದೇ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ರಾತ್ರಿ ಬಸ್ತಿಯ ರೈಲ್ವೆ ಬ್ರಿಡ್ಜ್ ಸಮೀಪ ರೈಲ್ವೆ ಹಳಿಗೆ ತಲೆಕೊಟ್ಟ ವೇಳೆ ಯಾವುದೋ ರೈಲು ಕುತ್ತಿಗೆ ಮದ್ಯ ಹಾದು ಹೋಗಿ ದೇಹದಿಂದ ಕುತ್ತಿಗೆ ಬೇರ್ಪಟ್ಟು ಸಾವನ್ನಪ್ಪಿದ್ದಾನೆ. ಈ ಕುರಿತು ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.