ಹೊನ್ನಾವರ : ತಾಲೂಕಿನ ಹಳದೀಪುರದಿಂದ ಕುದಬೈಲ್ ಮೂಲಕ ನವಿಲಗೋಣಿಗೆ ತೆರಳುವ ಕ್ರಾಸ್ ಅಂದರೆ ಹಳದೀಪುರದ ಚಿತ್ರಮಂದಿರ ಕ್ರಾಸ್ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾಗಿ ವರದಿಯಾಗಿದೆ.
ಸವಾರನಿಗೆ ಸಾರಿಗೆ ಇಲಾಖೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ದುರ್ಘಟನೆ ರವಿವಾರ ಮಧ್ಯಾಹ್ನ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ಹಳದೀಪುರದ ಸಂಕೊಳ್ಳಿಯ ಗಣಪತಿ ಅನಂತ ನಾಯ್ಕ (77) ಎಂದು ಗುರುತಿಸಲಾಗಿದೆ.
ಬೈಕ್ ಸವಾರ ರಾಷ್ಟ್ರೀಯ ಹೆದ್ದಾರಿಯಿಂದ ಒಳ ರಸ್ತೆಗೆ ಹೊರಳಿಕೊಳ್ಳುವ ಯತ್ನದಲ್ಲಿರುವಾಗ ಎದುರಿನಿಂದ ವೇಗವಾಗಿ ಬರುತ್ತಿದ್ದ ಚಿಕ್ಕಮಗಳೂರು – ಕಾರವಾರ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು ಎನ್ನಲಾಗಿದೆ. ಗಾಯಗೊಂಡವರನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ತಿರುವಿನಲ್ಲಿ ಹಿಂದೆಯೂ ಅಪಘಾತ ಸಂಭವಿಸಿ ಓರ್ವ ಮಹಿಳೆ ದುರ್ಮರಣಕ್ಕೀಡಾಗಿದ್ದಳು.